Dhaka: ಬಾಂಗ್ಲಾದೇಶದಲ್ಲಿ (Bangladesh)ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚಾಗಿವೆ. ಹಿಂದೂಗಳ ಮೇಲೆ ಆಗಿರುವ ದಾಳಿಗಳ ನಂತರ, ಚಿತ್ತಗಾಂಗ್ ಪ್ರದೇಶದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ.
ಈ ಘಟನೆ ಬಂದರ್ಬನ್ ಜಿಲ್ಲೆಯ ನೋಟುನ್ ತೊಂಗ್ಜ್ಹಿರಿ ತ್ರಿಪುರಾ ಪರಾ ಪ್ರದೇಶದಲ್ಲಿ ಸಂಭವಿಸಿದೆ. 17 ಮನೆಗಳು ಸಂಪೂರ್ಣವಾಗಿ ಭಸ್ಮವಾಗಿದ್ದು, ಇತರ ಎರಡು ಮನೆಗಳು ಭಾಗಶಃ ಸುಟ್ಟಿವೆ. ಆದರೆ, ಬಾಂಗ್ಲಾ ಸರ್ಕಾರವು ಇದಕ್ಕೆ ಪ್ರತಿಕ್ರಿಯೆ ನೀಡುತ್ತಿದ್ದು, ಇದು ಒಂದೇ ಸಮುದಾಯದ ಎರಡು ಗುಂಪುಗಳ ನಡುವಿನ ವೈಷಮ್ಯದಿಂದ ಸಂಭವಿಸಿದೆ ಎಂದು ಹೇಳಿದೆ.
ಗ್ರಾಮಸ್ಥರ ಪ್ರಕಾರ, ಕ್ರಿಸ್ಮಸ್ ಸಂದರ್ಭದ ಸಾಮೂಹಿಕ ಪ್ರಾರ್ಥನೆಗೆ ಹೋಗಿದ್ದಾಗ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸಮುದಾಯದ ಹಿರಿಯ ಮುಖಂಡನ ದೂರಿನಂತೆ, 6 ಮಂದಿಯನ್ನು ವಿರೋಧಿ ಕ್ರಿಶ್ಚಿಯನ್ ಗುಂಪಿನ ಸದಸ್ಯರು ಹಾಗೂ ಬೆಂಗಾಲಿ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.