back to top
14.4 C
Bengaluru
Saturday, January 17, 2026
HomeKarnatakaChikkaballapuraಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳ ಪ್ರತಿಭಟನೆ

ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

Gauribidanur : ಗೌರಿಬಿದನೂರು ನಗರದ ನ್ಯಾಷನಲ್ ಕಾಲೇಜು (National College) ಮತ್ತು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ (Government First Grade College) ಬಳಿ ಸೋಮವಾರ ಕೇಸರಿ ಶಾಲು (Saffron Shawl) ಧರಿಸಿ ವಿದ್ಯಾರ್ಥಿಗಳು ಆಗಮಿಸಿದ್ದರು. ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನ ಗೇಟ್ ಬಳಿಯೇ ಇದ್ದ ಪೊಲೀಸರು ತರಗತಿಯ ಒಳಗೆ ಹೋಗಲು ಅವಕಾಶ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಾಲೇಜಿನ ಗೇಟ್ ಮುಂದೆ ಕುಳಿತು ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು.

‌ಮಂಗಳವಾರ ವಿದ್ಯಾರ್ಥಿಗಳು ನ್ಯಾಷನಲ್ ಕಾಲೇಜಿನ ಬಳಿ ಪದವಿ ಕಾಲೇಜಿನ ಪ್ರಾಂಶುಪಾಲರಿಗೆ ಸರ್ಕಾರದ ಆದೇಶ ಪ್ರತಿ ನೀಡಿ ಎಲ್ಲ ವಿದ್ಯಾರ್ಥಿಗಳು ‌ಸಮವಸ್ತ್ರ ಧರಿಸಿ ಬರುವಂತೆ ತಿಳಿಸಿ ಎಂದು‌ ಹೇಳಿದರು.

ಇದಕ್ಕೆ ಪ್ರತಿಕ್ರಿಸಿದ ಪ್ರಾಂಶುಪಾಲ ಕೆ.ಪಿ. ನಾರಾಯಣಪ್ಪ, ಕಾಲೇಜಿನ ಆಡಳಿತ ಮಂಡಳಿಯ ಆದೇಶದ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

You cannot copy content of this page