
Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಜನತಾದರ್ಶನ (Janata Darshana) ಸಭೆ ನಡೆಯಿತು. ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅಧ್ಯಕ್ಷತೆಯಲ್ಲಿ ಜನತಾ ದರ್ಶನ ನಡೆಯುತ್ತದೆ ಎಂದು ಪ್ರಚಾರ ಮಾಡಲಾಗಿತ್ತಾದರೂ ಶಾಸಕರು ಸಭೆಗೆ ಗೈರಾಗಿದ್ದರು.
ಒಟ್ಟು104 ಅರ್ಜಿಗಳು ಜನತಾ ದರ್ಶನದಲ್ಲಿ ಸಲ್ಲಿಕೆಯಾದವು. ಆ ಪೈಕಿ 5 ಅರ್ಜಿಗಳಿಗೆ ಅಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ನೀಡಿದರು. 60ಕ್ಕೂ ಹೆಚ್ಚು ಅರ್ಜಿಗಳು ಬಗರ್ ಹುಕುಂ ಅರ್ಜಿ ನಮೂನೆ 50 ಮತ್ತು 53ಕ್ಕೆ ಸಂಬಂಧಿಸಿದ್ದು ಗೃಹಲಕ್ಷ್ಮಿ ಸೇರಿದಂತೆ ಇತರೆ ಗ್ಯಾರಂಟಿ ಯೋಜನೆಗಳಡಿ ಹಣ ಬಂದಿಲ್ಲ ಎಂಬ ಅರ್ಜಿಗಳು ಸಲ್ಲಿಕೆಯಾಗಿವೆ. ಪಿಂಚಣಿ, ಜಮೀನಿಗೆ ರಸ್ತೆ, ಸರ್ಕಾರಿ ಭೂಮಿ ಒತ್ತುವರಿ ಕುರಿತು ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಿದ್ದಾರೆ. 5 ಅರ್ಜಿಗಳನ್ನು ಹೊರತುಪಡಿಸಿ ಉಳಿದವರಿಗೆ ಅಧಿಕಾರಿಗಳು ಅರ್ಜಿದಾರರಿಗೆ ಸ್ವೀಕೃತಿಯ ರಸೀದಿ ಕೊಟ್ಟು ಕಳುಹಿಸಲಾಯಿತು.
ಜನತಾ ದರ್ಶನದ ಸಭೆಯಲ್ಲಿ ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ತಹಶೀಲ್ದಾರ್ ಅನಿಲ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಮಂಜುನಾಥ್, ನಗರಸಭೆ ಪೌರಾಯುಕ್ತ ಮಂಜುನಾಥ್, ವೃತ್ತ ನಿರೀಕ್ಷಕ ಮಂಜುನಾಥ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
The post ಜನತಾದರ್ಶನಕ್ಕೆ ಶಾಸಕರ ಗೈರು appeared first on Chikkaballapur.