HomeKarnatakaChikkaballapuraಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದ ಸರ್ ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಸೋಮವಾರ ಕರ್ನಾಟಕ ಬಾಲವಿಕಾಸ ಆಕಾಡೆಮಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ (District level Makkala Habba) ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ. ಅರುಣಾ ಕುಮಾರಿ “ಪ್ರತಿ ಮಗುವಿನಲ್ಲಿ ತನ್ನದೇ ಆದ ಪ್ರತಿಭೆ ಅಡಗಿರುತ್ತದೆ. ಆ ಪ್ರತಿಭೆಯನ್ನು ಹೊರಹಾಕಲು ಸೂಕ್ತ ಸಮಯ ಮತ್ತು ವೇದಿಕೆ ಅಗತ್ಯ. ಮಕ್ಕಳು ಕೌಶಲ, ಸೃಜನಾತ್ಮಕತೆ, ನೈಪುಣ್ಯದ ಗುಣಗಳನ್ನು ಹೊರಹಾಕಲು ಸಾಂಸ್ಕೃತಿಕ, ಸಾಹಿತ್ಯ, ಸಂಗೀತ, ನೃತ್ಯ, ಕ್ರೀಡೆ ಮುಂತಾದ ಚಟುವಟಿ ಗಳಲ್ಲಿ ಭಾಗವಹಿಸಬೇಕು. ಮಕ್ಕಳಲ್ಲಿನ ಪ್ರತಿಭೆಯನ್ನು ಪಾಲಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹ ನೀಡಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎ.ರಾಮರಾಜೇ ಅರಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ಸರ್.ಎಂ ವಿ ಸ್ಮಾರಕ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಪರಮಶಿವ ಮೂರ್ತಿ, ಮುಖ್ಯ ಶಿಕ್ಷಕ ನರಸಿಂಹಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

The post ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ appeared first on Chikkaballapur | ಚಿಕ್ಕಬಳ್ಳಾಪುರ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here

Captcha verification failed!
CAPTCHA user score failed. Please contact us!