Bagepalli : ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ (Yellampalli) ಗ್ರಾಮದ ಲಕ್ಷ್ಮಿವೆಂಕಟರಮಣ ಸ್ವಾಮಿಯ (Lakshmi Venkataramana Swamy) ರಥೋತ್ಸವ (Rathotsava) ವಿಜೃಂಭಣೆಯಿಂದ ಭಾನುವಾರ ನಡೆಯಿತು.
ದೇವರಿಗೆ ಫಲಪಂಚಾಮೃತ ಅಭಿಷೇಕ, ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನಡೆಸಿ ಹೂವಿನ ಅಲಂಕಾರ ಮಾಡಲಾಗಿತ್ತು.
ದೇವಾಲಯದ ಆವರಣವನ್ನು ತಳಿರುತೋರಣಗಳಿಂದ ಹಾಗೂ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ದೇವರ ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತಲೂ ಪ್ರದಕ್ಷಿಣೆ ಮಾಡಿಸಿ ನಂತರ ಉತ್ಸವ ಮೂರ್ತಿಯನ್ನು ರಥದಲ್ಲಿ ಇರಿಸಿ ಗ್ರಾಮದ ಮುಖ್ಯಬೀದಿಗಳಲ್ಲಿ ನಾದಸ್ವಾರ, ಡೋಲು ವಾದನದೊಂದಿಗೆ ಮೆರವಣಿಗೆ ಮಾಡಲಾಯಿತು.
ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳು ಅಲ್ಲದೇ ಬೆಂಗಳೂರು, ಚಿಕ್ಕಬಳ್ಳಾಪುರ, ಆಂಧ್ರಪ್ರದೇಶದ ಕದಿರಿ ಸೇರಿದಂತೆ ವಿವಿಧ ಕಡೆಗಳಿಂದ ಭಕ್ತರು ಆಗಮಿಸಿದ್ದರು.
For Daily Updates WhatsApp ‘HI’ to 7406303366
The post ಯಲ್ಲಂಪಲ್ಲಿ ಲಕ್ಷ್ಮಿವೆಂಕಟರಮಣ ಸ್ವಾಮಿಯ ರಥೋತ್ಸವ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.