HomeKarnatakaChikkaballapuraಭ್ರೂಣ ಲಿಂಗ ಪತ್ತೆ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಗಟ್ಪಬೇಕು : ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ

ಭ್ರೂಣ ಲಿಂಗ ಪತ್ತೆ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಗಟ್ಪಬೇಕು : ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ (Review Meeting) ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತಾನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ “ತಾಲ್ಲೂಕಿನಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಗಳನ್ನು ಪರಿಶೀಲಿಸಿ ಭ್ರೂಣ ಹತ್ಯೆ ಮತ್ತು ಭ್ರೂಣ ಲಿಂಗ ಪತ್ತೆ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಗಟ್ಪಬೇಕು. ಸುಸ್ಥಿತಿಯಲ್ಲಿಲ್ಲದ ಶಾಲಾ ಕೊಠಡಿಗಳನ್ನು ಶಾಲಾ ಸಾಕ್ಷರತೆ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಳೇ ಮನೆಗಳು, ಮಣ್ಣಿನಿಂದ ನಿರ್ಮಿಸಿರುವ ಮನೆಗಳು, ಕಲ್ಲು ಚಪ್ಪಡಿಗಳಿಂದ ನಿರ್ಮಿಸಿರುವ ಮನೆಗಳನ್ನು ಗುರುತಿಸಿ ಮಾಹಿತಿಯನ್ನು ಮೇಲಧಿಕಾರಿಗಳಿಗೆ ನೀಡಬೇಕು. ತ್ಯಾಜ್ಯ ವಿಲೇವಾರಿ, ಬೆಳೆ ಹಾನಿ ಈ ಬಗ್ಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಕೂಡಲೇ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಬೇಕು” ಎಂದು ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ತಹಶೀಲ್ದಾರ್ ಅನಿಲ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಷಾದ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

The post ಭ್ರೂಣ ಲಿಂಗ ಪತ್ತೆ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಗಟ್ಪಬೇಕು : ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here

Captcha verification failed!
CAPTCHA user score failed. Please contact us!