HomeKarnatakaChikkaballapura3 ಪಕ್ಷಗಳಿಂದ ದಲಿತರಿಗೆ ನ್ಯಾಯ ಸಿಕ್ಕಿಲ್ಲ : ನಟ ಚೇತನ್

3 ಪಕ್ಷಗಳಿಂದ ದಲಿತರಿಗೆ ನ್ಯಾಯ ಸಿಕ್ಕಿಲ್ಲ : ನಟ ಚೇತನ್

- Advertisement -
- Advertisement -

Chikkaballapur : ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ನಿಂದ ದಲಿತರಿಗೆ ನ್ಯಾಯ ಸಿಕ್ಕಿಲ್ಲವೆಂದು ಆರೋಪಿಸಿ ನಟ ಚೇತನ್ (Chetan Ahimsa) ಚಿಕ್ಕಬಳ್ಳಾಪುರ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ (Press Meet) ನಡೆಸಿದರು.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಲಿಂಗಾಯತರಿಗೆ ಬಿಜೆಪಿ, ಒಕ್ಕಲಿಗರಿಗೆ ಜೆಡಿಎಸ್ ಮತ್ತು ಮುಸ್ಲಿಮರಿಗೆ ಕಾಂಗ್ರೆಸ್ ಎನ್ನುವ ಸ್ಥಿತಿ ಇದೆ. ಆದರೆ ದಲಿತರಿಗೆ ಈ ಪಕ್ಷಗಳು ನ್ಯಾಯ ಒದಗಿಸಿಲ್ಲ. ಅಧಿಕಾರದ ದಾಹ ಮತ್ತು ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ದಲಿತರ ಮತ್ತು ಆದಿವಾಸಿಗಳ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ. ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದಾಗ ಜಮೀನು ಡಿನೋಟಿಫಿಕೇಷನ್ ಮಾಡಲಾಗಿದೆ.
ಮುಡಾ ಹಗರಣದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್‌ನ ಯಾರು ಲಾಭ ಪಡೆದಿದ್ದಾರೆ ಎನ್ನುವ ಬಗ್ಗೆ ತನಿಖೆ ಆಗಬೇಕು. ಮುಖ್ಯಮಂತ್ರಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ನಾವು ಹೇಳುತ್ತಿಲ್ಲ. ಆದರೆ ಸತ್ಯದ ತನಿಖೆ ಆಗಬೇಕು ಎಂದು ಚೇತನ್ ತಿಳಿಸಿದರು.

ಗೋಷ್ಠಿಯಲ್ಲಿ ವಕೀಲ ಹರಿರಾಮ್, ನಾಗಾರ್ಜುನ, ಮುನಿರಾಜು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

The post 3 ಪಕ್ಷಗಳಿಂದ ದಲಿತರಿಗೆ ನ್ಯಾಯ ಸಿಕ್ಕಿಲ್ಲ : ನಟ ಚೇತನ್ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here

Captcha verification failed!
CAPTCHA user score failed. Please contact us!