
Chikkaballapur : ಚಿಕ್ಕಬಳ್ಳಾಪುರ ತಾಲೂಕ್ಕಿನ ಬೀಚಗಾನಹಳ್ಳಿ (Beechaganahalli) ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಪರಿವರ್ತನಾ ಟ್ರಸ್ಟ್ ಆಶ್ರಯದಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು (Grameena Kreedakoota) ಹಮ್ಮಿಕೊಲಾಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗಾನಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೃಷ್ಣಂರಾಜು “ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಿದಾಗ ಈ ಹಿಂದಿನ ಕ್ರೀಡೆಗಳು ಮರುಕಳಿಸಲಿದ್ದು ಯುವಜನರು ಗ್ರಾಮೀಣ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು” ಎಂದು ತಿಳಿಸಿದರು.
ಪರಿವರ್ತನಾ ಟ್ರಸ್ಟ್ ಅಧ್ಯಕ್ಷ ಬಿ.ವೇಣು, ಉಷಾ, ರಾಧಿಕಾ, ವೆಂಕಟರಾಜು, ಪ್ರೌಢಶಾಲಾ ಸಹ ಶಿಕ್ಷಕರು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post ಗ್ರಾಮೀಣ ಕ್ರೀಡಾಕೂಟ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.







