Bangaluru: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ದೇಶ ಒಂದು ಚುನಾವಣೆಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ, ‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು. ಇದರ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಪರ‍್ಥಿಕತೆ ತತ್ತರಿಸುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ಈ ಬಗ್ಗೆ ಯೋಚನೆ ಮಾಡುತ್ತಿಲ್ಲ ಪ್ರಧಾನ ಮಂತ್ರಿಗಳು ‘ಒಂದು ದೇಶ ಒಂದು ಚುನಾವಣೆ’ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ ಎಂದರು.
ದೇಶದ ಜನಾಭಿಪ್ರಾಯವೂ ‘‘ಒಂದು ದೇಶ ಒಂದು ಚುನಾವಣೆ’’ ವ್ಯವಸ್ಥೆಗೆ ವಿರುದ್ಧವಾಗಿದೆ. ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಅಕ್ಷೇಪ ವ್ಯಕ್ತಪಡಿಸಿದರು.