New York: ಇದು ಕಳೆದ ಮೂರು ತಿಂಗಳ ಅವಧಿಯಲ್ಲಿ ಮೂರನೇ ಭೇಟಿಯಾಗಿದೆ. ಆಗಸ್ಟ್ 23 ರಂದು ಉಕ್ರೇನ್ (Ukraine) ಭೇಟಿ ವೇಳೆ ಕೀವ್ ನಲ್ಲಿ, ಜೂನ್ ನಲ್ಲಿ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಮೋದಿ ಹಾಗೂ ಝೆಲೆನ್ ಸ್ಕಿ ಮಾತುಕತೆ ನಡೆಸಿದ್ದರು. ಇದೀಗ ನ್ಯೂಯಾರ್ಕ್ ನಲ್ಲಿ ನಡೆದ ವಿಶ್ವಸಂಸ್ಥೆಯ ಭವಿಷ್ಯದ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, (PM Modi)ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy )ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನ್ಯೂಯಾರ್ಕ್ (New York ) ಭೇಟಿ ವೇಳೆ ಪರಸ್ಪರ ನಂಬಿಕೆ, ಗೌರವ ಮತ್ತು ಮುಕ್ತತೆಯ ಆಧಾರದ ಮೇಲೆ ಎರಡೂ ದೇಶಗಳ ಜನರ ಅನುಕೂಲಕ್ಕಾಗಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ತಮ್ಮ ಬದ್ಧತೆಯನ್ನು ಮೋದಿ ಪುನರುಚ್ಚರಿಸಿದರು.
Palestinian ಅಧ್ಯಕ್ಷ ಅಬ್ಬಾಸ್ ಅವರನ್ನು ಭೇಟಿ
ಗಾಜಾದಲ್ಲಿನ ಮಾನವೀಯ ಬಿಕ್ಕಟ್ಟಿನ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದ ಮತ್ತು ಶಾಂತಿಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಿ ಮೋದಿ ಅವರು ನ್ಯೂಯಾರ್ಕ್ನಲ್ಲಿ ಪ್ಯಾಲೆಸ್ತೀನ್ (Palestine) ಅಧ್ಯಕ್ಷ ಅಬ್ಬಾಸ್ (Mahmoud Abbas) ಅವರನ್ನು ಭೇಟಿ ಮಾಡಿದರು.
ಮೂರು ದಿನಗಳ ಅಮೇರಿಕಾ ಭೇಟಿಯ ಎರಡನೇ ಹಂತದಲ್ಲಿ ನ್ಯೂಯಾರ್ಕ್ನಲ್ಲಿರುವ ಮೋದಿ ಭಾನುವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನೇಪಥ್ಯದಲ್ಲಿ ನಾಯಕರನ್ನು ಭೇಟಿ ಮಾಡಿದರು. “ನ್ಯೂಯಾರ್ಕ್ನಲ್ಲಿ ಅಧ್ಯಕ್ಷ ಮಹಮೂದ್ ಅಬ್ಬಾಸ್ (Mahmoud Abbas) ಅವರನ್ನು ಭೇಟಿಯಾದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಶೀಘ್ರ ಮರುಸ್ಥಾಪನೆಗಾಗಿ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. ಪ್ಯಾಲೆಸ್ಟೈನ್ (Palestinian) ಜನರೊಂದಿಗೆ ದೀರ್ಘಕಾಲದ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು, ”ಎಂದು ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.