ಭಾರತ ಟೆಸ್ಟ್ ತಂಡದಿಂದ (Indian Test team) ಹೊರಬಿದ್ದಿರುವ ಚೇತೇಶ್ವರ ಪೂಜಾರ (Cheteshwar Pujara) ದೇಶೀಯ ಅಂಗಳದಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಅದರಲ್ಲೂ ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿ (Ranji Trophy) ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿಶೇಷ ಎಂದರೆ ಇದು ಪೂಜಾರ ಅವರ 66ನೇ ಪ್ರಥಮ ದರ್ಜೆ ಟೆಸ್ಟ್ ಸೆಂಚುರಿ. ಈ ಮೂಲಕ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ಲೆಜೆಂಡ್ ಬ್ರಿಯಾನ್ ಲಾರಾ (65 ಶತಕ) ಅವರನ್ನು ಹಿಂದಿಕ್ಕಿದ್ದಾರೆ.
ಹಾಗೆಯೇ ಈ ಶತಕದೊಂದಿಗೆ ಚೇತೇಶ್ವರ ಪೂಜಾರ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 21 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಪ್ರಥಮ ದರ್ಜೆಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಹಾಗೆಯೇ ಹೆಚ್ಚು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಮೂರನೇ ಭಾರತೀಯ ಬ್ಯಾಟರ್ಗಳ ಪಟ್ಟಿಯಲ್ಲಿ ಪೂಜಾರ ಮೂರನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಗವಾಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ತಲಾ 81 ಶತಕಗಳೊಂದಿಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ.
ಇನ್ನು 68 ಶತಕಗಳೊಂದಿಗೆ ರಾಹುಲ್ ದ್ರಾವಿಡ್ ಎರಡನೇ ಸ್ಥಾನದಲ್ಲಿದ್ದರೆ, ಇದೀಗ 66ನೇ ಶತಕ ಸಿಡಿಸಿ ಪೂಜಾರಾ ಮೂರನೇ ಸ್ಥಾನ ಅಲಂಕರಿಸಿದ್ದಾರೆ.