Bengaluru: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ವ್ಯಾಪಕವಾಗಿ ಮಳೆಯಾಗಿದ್ದರೆ, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗಿದೆ.
ಮಧ್ಯಾಹ್ನ 2 ಗಂಟೆಗೆ ಅಲರ್ಟ್ ನೀಡಿರುವ ಹವಾಮಾನ ಇಲಾಖೆ (Meteorological Department) ಕರ್ನಾಟಕದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಮುಂದಿನ ಮೂರು ಗಂಟೆಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ (lightening rain) ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ.
ದಕ್ಷಿಣ ಕನ್ನಡ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ತುಮಕೂರು, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ಯೆಲ್ಲೋ ಅಲರ್ಟ್ (Yellow alert) ನೀಡಿರುವ ಹವಾಮಾನ ಇಲಾಖೆ ಸಂಜೆ ವೇಳೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು ಮುನ್ನೆಚ್ಚರಿಕೆಯಿಂದ ಇರುವಂತೆ ತಿಳಿಸಿದೆ.
ದುರ್ಬಲ ಮರಗಳು ಬೀಳುವ ಸಾಧ್ಯತೆ ಇದ್ದು, ಶಿಥಿಲ ಕಟ್ಟಡಗಳಿಗೆ ಹಾನಿಯಾಗುವ ಸಾಧ್ಯತೆ, ವಿದ್ಯುತ್ ಕಟ್ ಆಗಬಹುದು, ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಹೇಳಿದೆ.
ಇಂದು ಮಳೆ ಮುನ್ನೆಚ್ಚರಿಕೆ ಇರುವುದರಿಂದ ಬೆಂಗಳೂರು ನಗರದ ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.
ಅಕ್ಟೋಬರ್ 24 ರಿಂದ 27 ರವರೆಗೆ ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರ ಅಲ್ಲಲ್ಲಿ ಮಾತ್ರ ಮಳೆಯಾಗಲಿದೆ.
ಬೆಳಗಾವಿ, ಧಾರವಾಡ, ಹಾವೇರಿಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 26 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.