ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ವಿವಿಎಸ್ ಲಕ್ಷ್ಮಣ್ (VVS Laxman) ಅವರನ್ನು ಭಾರತ ತಂಡದ ಮುಖ್ಯ ಕೋಚ್ (coach) ಆಗಿ ನೇಮಕ ಮಾಡಲಾಗಿದೆ.
ಟೀಮ್ ಇಂಡಿಯಾ (Team India) ನ್ಯೂಝಿಲೆಂಡ್ (New Zealand) ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಗಾಗಿ ತೆರಳಲಿದ್ದು, ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಅಲಭ್ಯರಾಗಲಿದ್ದಾರೆ.
ಹೀಗಾಗಿ ಸೌತ್ ಆಫ್ರಿಕಾ ವಿರುದ್ದದ ಸರಣಿಗಾಗಿ ವಿವಿಎಸ್ ಲಕ್ಷ್ಮಣ್ ಅವರನ್ನು ಕೋಚ್ ಆಗಿ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ನವೆಂಬರ್ 8 ರಿಂದ ಆರಂಭವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಮುಖ್ಯ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಹಿಂದೆ ಕೂಡ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ತಾತ್ಕಾಲಿಕ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಂಡಿದ್ದರು. ರಾಹುಲ್ ದ್ರಾವಿಡ್ ಅವರ ಅನುಪಸ್ಥಿತಿಯ ವೇಳೆ ಲಕ್ಷ್ಮಣ್ ಅವರನ್ನು ಹಲವು ಸರಣಿಗಳಿಗೆ ಕೋಚ್ ಆಗಿ ನೇಮಿಸಲಾಗಿತ್ತು.
ಇದೀಗ ಎನ್ಸಿಎ ಮುಖ್ಯಸ್ಥನ ಹುದ್ದೆಯಲ್ಲಿ ಮುಂದುವರೆದಿರುವ ಲಕ್ಷ್ಮಣ್ ಅವರು ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ವೇಳೆ ತಂಡದ ಕೋಚಿಂಗ್ ಜವಾಬ್ದಾರಿಯನ್ನು ಹೆಗಲೇರಿಸಿಕೊಳ್ಳಲಿದ್ದಾರೆ.
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯು ನವೆಂಬರ್ 8 ರಿಂದ ಶುರುವಾಗಲಿದೆ. ಸೌತ್ ಆಫ್ರಿಕಾದಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರ ಭಾರತ ತಂಡವನ್ನು ಈಗಾಗಲೇ ಘೋಷಿಸಲಾಗಿದೆ.
ಭಾರತ ಟಿ20 ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ರಮಣ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.