back to top
23 C
Bengaluru
Thursday, November 21, 2024
HomeKarnatakaBengaluru RuralCP Yogeshwar ಮತ್ತು ರಘುನಂದನ್ ರಾಮಣ್ಣ ನಡುವೆ ಯಶಸ್ವಿ ಸಂಧಾನ

CP Yogeshwar ಮತ್ತು ರಘುನಂದನ್ ರಾಮಣ್ಣ ನಡುವೆ ಯಶಸ್ವಿ ಸಂಧಾನ

- Advertisement -
- Advertisement -

ಬೆಂಗಳೂರು: ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ (Channapatna assembly by-election) ಕ್ಷೇತ್ರದ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದರಿಂದ ಆಸಮಧಾನಗೊಂಡಿದ್ದ ಬೆಂಗಳೂರು – ಮೈಸೂರು ಇನ್ಫ್ರಾಸ್ಟ್ರಕ್ಟ‌ರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (Bangalore-Mysore Infrastructure Corridor Planning Authority-BMICAPA) ಅಧ್ಯಕ್ಷ ರಘುನಂದನ್ ರಾಮಣ್ಣ (Raghunandan Ramanna) ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ (CP Yogeshwar) ನಡುವೆ ಸಂಧಾನ ನಡೆಸುವಲ್ಲಿ DCM ಡಿ ಕೆ ಶಿವಕುಮಾರ್ (DK Shivakumar) ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ (MP DK Suresh) ಅವರು ಯಶಸ್ವಿಯಾಗಿದ್ದಾರೆ.

ಶಿವಕುಮಾರ್ ಅವರು ಈ ಇಬ್ಬರು ನಾಯಕರನ್ನೂ ಸದಾಶಿವನಗರದ ತಮ್ಮ ನಿವಾಸಕ್ಕೆ ಮಂಗಳವಾರ ಬೆಳಗ್ಗೆ ಕರೆಸಿ ಡಿ ಕೆ ಸುರೇಶ್ ಅವರ ಸಮ್ಮುಖದಲ್ಲಿ ಮಾತುಕತೆ ನಡೆಸಿದರು. ನಂತರ ಇಬ್ಬರು ನಾಯಕರೂ ಪರಸ್ಪರ ಹಸ್ತಲಾಘವ ಮಾಡಿದರು.ಯೋಗೇಶ್ವರ್ ಅವರ ಪರ ಪ್ರಚಾರ ನಡೆಸಿ, ಅವರ ಗೆಲುವಿಗೆ ಶ್ರಮಿಸುವುದಾಗಿ ರಘುನಂದನ್ ರಾಮಣ್ಣ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಕಳೆದ ಲೋಕಸಭಾ ಚುನಾವಣೆ ವೇಳೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ರಘುನಂದನ್ ರಾಮಣ್ಣ ಅವರು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದರು.

ಚನ್ನಪಟ್ಟಣ ನಗರಸಭೆಯ 14 ಮಂದಿ ಜೆಡಿಎಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಲ್ಲದೆ ತಾಲೂಕಿನಾದ್ಯಂತ ನೂರಾರು ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ 15 ಸಾವಿರವಿದ್ದ ಕಾಂಗ್ರೆಸ್ ಮತ ಗಳಿಕೆ ಪ್ರಮಾಣ ಲೋಕಸಭೆ ಚುನಾವಣೆ ವೇಳೆಗೆ 87 ಸಾವಿರಕ್ಕೆ ಏರಿಕೆಯಾಗಿತ್ತು.ಇದಲ್ಲದೆ ಕ್ಷೇತ್ರಕ್ಕೆ ಸರಕಾರದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳು ಬರುವಲ್ಲಿಯೂ ರಘುನಂದನ್ ರಾಮಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು.ಈಗ ಯೋಗೇಶ್ವರ್ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page