Chikkaballapur : ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಮುಂಭಾಗ JDS ಕಾರ್ಯಕರ್ತರು ಮಂಗಳವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H. D. Kumaraswamy) ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಜಮೀರ್ ಅಹಮದ್ ಖಾನ್ (B.Z. Zameer Ahmed Khan) ವಿರುದ್ಧ ಪ್ರತಿಭಟಿಸಿದರು (Protest) .
ಪ್ರತಿಭಟನೆಯಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲಕುಂಟಹಳ್ಳಿ ಮುನಿಯಪ್ಪ ಮಾತನಾಡಿ “ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರು. ಇಂತಹ ನಾಯಕರ ಬಗ್ಗೆ ಜಮೀರ್ ಅಹಮದ್ ನಾಲಿಗೆ ಹರಿಬಿಟ್ಟು ಮಾತನಾಡಿದ್ದಾರೆ. ಇದು ತೀರಾ ಅಕ್ಷಮ್ಯ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಬಾಯಿಗೆ ಬಂದ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇವರ ನಡವಳಿಕೆಗಳನ್ನು ಜನರು ಗಮನಿಸುತ್ತಿದ್ದಾರೆ” ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಅಜ್ಜವಾರ ಕೆ.ಆರ್.ರೆಡ್ಡಿ, ಬಂಡ್ಲು ಶ್ರೀನಿವಾಸ್, ಮಂಜುನಾಥ್, ವೆಂಕಟೇಶ್, ಸಾದಿಕ್, ಜಮೀರ್, ಪಾರಿಜಾತಮ್ಮ, ತಮ್ಮನಾಯಕನಹಳ್ಳಿ ವೆಂಕಟೇಶ್, ಶ್ರೀಧರ್ ಹಾಗೂ ಮುಖಂಡರು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post Zameer Ahmed Khan ವಿರುದ್ಧ JDS ಪ್ರತಿಭಟನೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.