New Delhi : ತೈಲ ಕಂಪನಿಗಳು ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ (Commercial LPG Cylinder) ₹16.5 ಹೆಚ್ಚಳ ಮಾಡಿವೆ. ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ದರ ಪರಿಷ್ಕರಣೆ ಬಳಿಕ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದರ ₹1,818.50 ಆಗಿದ್ದು, 5 ಕೆ.ಜಿಯ ಸಿಲಿಂಡರ್ ದರದಲ್ಲೂ ₹4 ಹೆಚ್ಚಳ ಮಾಡಲಾಗಿದೆ. 14.2 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
ಕಳೆದ ತಿಂಗಳು ಕೂಡ 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ₹62 ಹೆಚ್ಚಿಸಲಾಗಿತ್ತು.
ಈ ಬೆಲೆ ಏರಿಕೆಯು ಎಲ್‌ಪಿಜಿ ಮೇಲೆ ಹೆಚ್ಚು ಅವಲಂಬಿತವಾಗಿರುವ ವಾಣಿಜ್ಯ ಸಂಸ್ಥೆಗಳು ಮತ್ತು ಸಣ್ಣ ವ್ಯಾಪಾರಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ.
ಈ ಬೆಲೆ ಪರಿಷ್ಕರಣೆಯು ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.