New Delhi: ಭಾರತ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನ (Masood Azhar) ಪ್ರಚೋದನಕಾರಿ ಚಟುವಟಿಕೆಗಳನ್ನು ತಡೆಗಟ್ಟಲು ಪಾಕಿಸ್ತಾನವನ್ನು ಒತ್ತಾಯಿಸಿದೆ. 2001ರ ಸಂಸತ್ ದಾಳಿ ಮತ್ತು 2019ರ ಪುಲ್ವಾಮಾ ದಾಳಿಯಂತಹ ದೌರ್ಜನ್ಯಗಳಲ್ಲಿ ಆತನ ಪಾತ್ರದ ಕುರಿತು ಆಕ್ರೋಶ ವ್ಯಕ್ತವಾಗಿದೆ.
ಇತ್ತೀಚೆಗೆ ಪಾಕಿಸ್ತಾನದ ಬಹವಾಲ್ಪುರನ ಇಸ್ಲಾಮಿಕ್ ಸೆಮಿನಾರಿನಲ್ಲಿ ಸಾರ್ವಜನಿಕ ಭಾಷಣ ಮಾಡಿದ ಮಸೂದ್, ಭಾರತದ ವಿರುದ್ಧ ಆಕ್ರಮಣಕಾರಿ ಮಾತುಗಳನ್ನಾಡಿ ದಾಳಿಗಳನ್ನು ತೀವ್ರಗೊಳಿಸುವ ಪ್ರಮಾಣಿಕೆಯನ್ನು ವ್ಯಕ್ತಪಡಿಸಿದ್ದಾನೆ.
ಭಯೋತ್ಪಾದಕ ಚಟುವಟಿಕೆಗಳಲ್ಲಿ ಮಸೂದ್ ಪಾತ್ರ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪಾಕಿಸ್ತಾನದ ವಿರುದ್ಧ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಆತನ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಪಾಕಿಸ್ತಾನವನ್ನು ಒತ್ತಾಯಿಸಿದೆ.
“ಅಜರ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ನ್ಯಾಯಸ್ಥಾನಕ್ಕೆ ತರಬೇಕು” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದು, ಪಾಕಿಸ್ತಾನ ತನ್ನ ದ್ವಂದ್ವ ನಿಲುವಿನಿಂದ ಹೊರಬಂದು ಸುಸ್ಥಿರ ಭದ್ರತೆಗಾಗಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.