Delhi: BJPಯ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ (97) (Senior BJP leader and former Deputy Prime Minister LK Advani) ವಯೋಸಹಜ ಅನಾರೋಗ್ಯದಿಂದ ಇಂದು (ಡಿ. 14) ದಿಢೀರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಡ್ವಾಣಿ ಅವರು ಕೆಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಅವರನ್ನು ನವದೆಹಲಿಯ ಮಥುರಾ ರಸ್ತೆಯ ಅಪೋಲೋ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆಸ್ಪತ್ರೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ತಜ್ಞ ವೈದ್ಯರ ನಿಗಾದಲ್ಲಿ ಅಡ್ವಾಣಿ ಅವರನ್ನು ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.