ಹಾನರ್ ಕಂಪನಿಯು ಹೊಸ Honor Magic 7 Lite ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದು ಬಜೆಟ್ ಬೆಲೆಯಲ್ಲಿ ಎರಡು ಸ್ಟೋರೇಜ್ ರೂಪಾಂತರ ಮತ್ತು ಎರಡು ಬಣ್ಣಗಳಲ್ಲಿ ಲಭ್ಯವಿದೆ. ಸ್ಮಾರ್ಟ್ಫೋನ್ ನ ಸ್ಟೈಲಿಶ್ ಡಿಸೈನ್ ಮತ್ತು ವೈಶಿಷ್ಟ್ಯಗಳು ಬಳಕೆದಾರರನ್ನು ಆಕರ್ಷಿಸುತ್ತಿವೆ.
ಡಿಸ್ಪ್ಲೇ ಮತ್ತು ಪ್ರೊಸೆಸರ್: ಹಾನರ್ ಮ್ಯಾಜಿಕ್ 7 ಲೈಟ್ 6.78 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ, 4000 ನಿಟ್ಸ್ ಗರಿಷ್ಠ ಬ್ರೈಟ್ನೆಸ್, 2700 × 1224 ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರ ಇದೆ. ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 6 ಜೆನ್ 1 ಪ್ರೊಸೆಸರ್ ಮತ್ತು ಅಡ್ರಿನೊ A710 ಜಿಪಿಯು ಇವು ಮೊಬೈಲ್ನ ಶಕ್ತಿಯ ಮೂಲ.
ಕ್ಯಾಮೆರಾ: ಈ ಮೊಬೈಲ್ನಲ್ಲಿ OIS ಬೆಂಬಲದ 108 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್: 6,600mAh ಬ್ಯಾಟರಿ ಹೊಂದಿದ ಈ ಫೋನಿಗೆ 66W ವೇಗದ ಚಾರ್ಜಿಂಗ್ ಸೌಲಭ್ಯ ಇದೆ.
ಇತರ ವೈಶಿಷ್ಟ್ಯಗಳು: ಫಿಂಗರ್ಪ್ರಿಂಟ್ ಸೆನ್ಸರ್, ಎಐ ವೈಶಿಷ್ಟ್ಯಗಳು, ಡ್ಯುಯಲ್ ಸ್ಟಿರಿಯೊ ಸ್ಪೀಕರ್, ಡ್ಯುಯಲ್ ಸಿಮ್, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.1, USB ಟೈಪ್-C ಮತ್ತು NFC ಹಾಗು ಇತರ ವೈಶಿಷ್ಟ್ಯಗಳು ಕೂಡ ಇದ್ದು, ಇದು ಉತ್ತಮ ಸಂಪರ್ಕ ಸೌಲಭ್ಯವನ್ನು ಒದಗಿಸುತ್ತದೆ.