
Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 12ನೇ ಶತಮಾನದ ವಚನಕಾರ ನಿಜಶರಣ ಅಂಬಿಗರ ಚೌಡಯ್ಯನವರ (Ambigara Chowdaiya) ಜಯಂತಿಯನ್ನು (Jayanthi) ಸರಳವಾಗಿ ಆಚರಿಸಲಾಯಿತು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದ ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.
ಶಿಡ್ಲಘಟ್ಟ:

ಶಿಡ್ಲಘಟ್ಟ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಮಂಗಳವಾರ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.
ಚಿಂತಾಮಣಿ :

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಕಾರದಿಂದ ಚಿಂತಾಮಣಿ ತಾಲ್ಲೂಕು ಆಡಳಿತ ಭವನದಲ್ಲಿ ಮಂಗಳವಾರ ನಡೆದ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
For Daily Updates WhatsApp ‘HI’ to 7406303366
The post ಜಿಲ್ಲೆಯಾದ್ಯಂತ ಅಂಬಿಗರ ಚೌಡಯ್ಯ ಜಯಂತಿ ಆಚರಣೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.