Chikkaballapur : ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮಂಗಳವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿಕ್ಕನಾರಪ್ಪನಹಳ್ಳಿ, ಕೊಮ್ಮಲಮರಿ ಮತ್ತು ದಿನ್ನಹಳ್ಳಿ ಗ್ರಾಮಗಳಲ್ಲಿ ‘ನಮ್ಮ ಊರಿಗೆ ನಮ್ಮ ಶಾಸಕರು’ (Namma Oorige Namma Shasakaru) ಕಾರ್ಯಕ್ರಮ (Program) ನಡೆಸಿದರು.
ರಸ್ತೆ, ಚರಂಡಿ, ಶೌಚಾಲಯ, ವಿದ್ಯುತ್ ಸಮಸ್ಯೆ, ಸಾರಿಗೆ ಸಮಸ್ಯೆ, ಭೂಮಿಯ ಸಮಸ್ಯೆ ಮತ್ತಿತರ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ಗ್ರಾಮಸ್ಥರು ತಂದರು. ಅಹವಾಲು ಆಲಿಸಿ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಸ್ಥಳದಲ್ಲೇ ನಿರ್ದೇಶನ ನೀಡಿದರು.
ತಹಶೀಲ್ದಾರ್ ಅನಿಲ್ ಕುಮಾರ್, ಕಮ್ಮಗುಟ್ಟಹಳ್ಳಿ ಗ್ರಾಪಂ ಪಿಡಿಒ, ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
The post ನಮ್ಮ ಊರಿಗೆ ನಮ್ಮ ಶಾಸಕರು appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.