ಸೌದಿ ಅರೇಬಿಯಾದ (Saudi Arabia) ಜಿಜಾನ್ ನಗರದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಭಾರತೀಯರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಭಾರತೀಯ ಕಾನ್ಸುಲೇಟ್ ಜನರಲ್ ಮತ್ತು ಭಾರತ ಸರ್ಕಾರ ದುರ್ದೈವಿಕ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಎಲ್ಲಾ ಅಗತ್ಯ ಸಹಾಯವನ್ನು ನೀಡಲು ಪ್ರಯತ್ನಿಸಿವೆ.
ಭದ್ರತಾ ಅಧಿಕಾರಿಗಳು ಮತ್ತು ಭಾರತೀಯ ರಾಯಭಾರ ಕಚೇರಿ ಸಂತ್ರಸ್ತರ ಕುಟುಂಬಗಳಿಗೆ ನೆರವು ನೀಡಲು ವಿಶೇಷ ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿವೆ.
- ಟೋಲ್ ಫ್ರೀ: 8002440003
- ದೂರವಾಣಿ: 0122614093, 0126614276
- WhatsApp: 0556122301
ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭಾರತ ಸರ್ಕಾರ ಸಂಪೂರ್ಣ ಸಹಕಾರ ನೀಡಲು ಭರವಸೆ ನೀಡಿದ್ದಾರೆ.