Mysuru: ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಸೀಟುಗಳನ್ನು ಅವರಿಗೇ ಬಿಟ್ಟುಕೊಡಬೇಕು ಎಂಬ ಸೂಚನೆಗಳನ್ನು ಹಿಂದೆ ನೋಡಿದ್ದೇವೆ. ಆದರೆ, ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಜಾರಿಗೆ ಬಂದ ನಂತರ, ಈಗ ಪುರುಷರಿಗೆ ಸೀಟು (male passengers) ಬಿಟ್ಟುಕೊಡಿ ಎಂಬ ಪರಿಸ್ಥಿತಿ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮೈಸೂರು ವಿಭಾಗ ಅಧಿಕೃತ ಆದೇಶ ಹೊರಡಿಸಿದೆ. ಪುರುಷ ಪ್ರಯಾಣಿಕರಿಗೆ ಮೀಸಲಾಗಿರುವ ಸೀಟುಗಳನ್ನು ಅವರಿಗೇ ನೀಡಬೇಕು ಎಂಬ ಸೂಚನೆ ಚಾಲಕರು ಹಾಗೂ ಸಿಬ್ಬಂದಿಗೆ ನೀಡಲಾಗಿದೆ.
KSRTC ಆದೇಶದ ವಿವರ
- ಪುರುಷ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿರುವ ಕುರಿತು ದೂರುಗಳು ಬಂದಿವೆ.
- ಇದರಿಂದಾಗಿ ಪುರುಷ ಪ್ರಯಾಣಿಕರಿಗೆ ಆಸನ ಸಿಗುತ್ತಿಲ್ಲ ಎಂಬ ದೂರು ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ.
- ಎಲ್ಲ ಸಾರಿಗೆ ಘಟಕಗಳಲ್ಲಿ ಈ ನಿಯಮ ಪಾಲನೆ ಮಾಡಲು ಚಾಲನಾ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
- ಈ ಆದೇಶದ ಅನುಸರಣಾ ವರದಿ ಕೂಡಾ ಕಳುಹಿಸುವಂತೆ ಸೂಚಿಸಲಾಗಿದೆ.
ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಇದರಿಂದ ಪುರುಷರಿಗೆ ಸೀಟು ಸಿಗುತ್ತಿಲ್ಲ ಎಂಬ ಗಂಭೀರ ವಿಷಯ KSRTC ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಿರುವುದು ರಾಜ್ಯದಲ್ಲಿ ಪ್ರಥಮ ಬಾರಿ ಎಂದು ಹೇಳಲಾಗಿದೆ.