ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ BCCI ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರ ಕಾರು ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್ಪುರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಅವರು Burdwanನಲ್ಲಿ ನಡೆದ ವಿಶೇಷ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಸಿಂಗೂರ್ ಬಳಿ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ತಕ್ಷಣ ಬ್ರೇಕ್ ಹಾಕಿದ ಕಾರಣ ಬೆಂಗಾವಲು ಪಡೆಯ ವಾಹನಗಳು ಒಂದರ ಹಿಂದೆ ಒಂದರಂತೆ ಡಿಕ್ಕಿಯಾದವು.
ಈ ಭೀಕರ ಅಪಘಾತದಿಂದ ಸೌರವ್ ಗಂಗೂಲಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಬೆಂಗಾವಲು ಪಡೆಯ ಕೆಲವು ವಾಹನಗಳಿಗೆ ಮಾತ್ರ ಹಾನಿಯಾಗಿದೆ.
ಆಘಾತದ ನಡುವೆಯೂ ಗಂಗೂಲಿ ತಮ್ಮ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಂಗಾಳದ ಕ್ರಿಕೆಟ್ ಬೆಳವಣಿಗೆಯ ಬಗ್ಗೆ ಮಾತನಾಡಿದ ಅವರು, ರಾಜ್ಯದಿಂದ ಮತ್ತಷ್ಟು ಪ್ರತಿಭಾವಂತ ಕ್ರಿಕೆಟಿಗರು ಹೊರಹೊಮ್ಮಲಿ ಎಂಬ ಆಶೆ ವ್ಯಕ್ತಪಡಿಸಿದರು. ಎಲ್ಲಾ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ನಂತರ, ಅವರು ಕೋಲ್ಕತ್ತಾಗೆ ಮರಳಿದರು.