Bengaluru: ಈ ವರ್ಷ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕನಿಷ್ಠ ಶೇಕಡಾ 35 ಅಂಕಗಳನ್ನು ಗಳಿಸುವುದು ಅಗತ್ಯ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ನಿಯಮವನ್ನು ಮತ್ತೆ ಜಾರಿಗೆ ತಂದಿದೆ.
ಕಳೆದ ವರ್ಷ ಅನುತ್ತೀರ್ಣ ವಿದ್ಯಾರ್ಥಿಗಳ ಸಂಖ್ಯೆಯನ್ನು ಗಮನದಲ್ಲಿಟ್ಟು, ಪಾಸಾಗಲು ಅಗತ್ಯ ಅಂಕವನ್ನು ಶೇಕಡಾ 25 ಕ್ಕೆ ಇಳಿಸಲಾಗಿತ್ತು. ಅಲ್ಲದೆ, ಗ್ರೇಸ್ ಮಾರ್ಕ್ ನೀಡಲಾಗಿತ್ತು. ಆದರೆ ಈ ಬಾರಿ ಈ ವ್ಯವಸ್ಥೆ ಅಸ್ತಿತ್ವದಲ್ಲಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ವರ್ಷ ಯಾವುದೇ ಗ್ರೇಸ್ ಅಂಕ ನೀಡಲಾಗುವುದಿಲ್ಲ ಮತ್ತು ಪಾಸಿಂಗ್ ಅಂಕ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಪರೀಕ್ಷೆ ವೇಳಾಪಟ್ಟಿ
SSLC ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದ್ದು, ಒಟ್ಟು 8,96,447 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.