Tumkur (Tumakuru) : ತುಮಕೂರಿನ ಐತಿಹಾಸ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ (Shree Siddaganga Math) ಗುರುವಾರ ಸಂಜೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) ಭೇಟಿ (Visit) ನೀಡಿ ಮಕ್ಕಳ ಜತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು.
ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ” ಹಿಂದೆ ಮಠಕ್ಕೆ ಬಂದಿದ್ದಾಗ ನಮಗೆಲ್ಲ ಮಾರ್ಗದರ್ಶಕರಾಗಿದ್ದ ಶಿವಕುಮಾರ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದೆ ಆದರೆ ಈಗ ಅವರಿಲ್ಲ ಎಂಬುದು ದುಃಖದ ಸಂಗತಿ. ಬಸವಣ್ಣನ ಸಂದೇಶವನ್ನು ಜಗತ್ತಿಗೆ ತಿಳಿಸುವ ಪ್ರಯತ್ನದಲ್ಲಿ ಮಠ, ಸ್ವಾಮೀಜಿ ಸಾಗಿದ್ದಾರೆ. ತ್ರಿವಿಧ ದಾಸೋಹದ ಮೂಲಕ ನಾಡಿಗೆ ಮಾದರಿ ಸಂದೇಶ ನೀಡಿರುವ ಅವರ ದಾರಿಯಲ್ಲಿ ನಾವೆಲ್ಲ ಸಾಗಬೇಕಿದೆ. ಅಜ್ಜಿ ಇಂದಿರಾ ಗಾಂಧಿ, ತಂದೆ ರಾಜೀವ್ ಗಾಂಧಿ, ತಾಯಿ ಸೋನಿಯಾ ಗಾಂಧಿ ಮಠಕ್ಕೆ ಭೇಟಿಕೊಟ್ಟಿದ್ದಾರೆ. ಹಿಂದಿನಿಂದಲೂ ಮಠದ ಜತೆಗೆ ತಮ್ಮ ಕುಟುಂಬ ಅವಿನಾಭಾವ ಸಂಬಂಧ ಹೊಂದಿದ್ದು ಮುಂದಿನ ದಿನಗಳಲ್ಲೂ ಇದೇ ಸಂಬಂಧ ಮುಂದುವರಿಸಿ ಮಠಕ್ಕೆ ಬೇಕಾದ ಅಗತ್ಯ ನೆರವನ್ನು ನೀಡಲಾಗುವುದು” ಎಂದು ಹೇಳಿದರು.
KPCC ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖಂಡರಾದ ಡಾ.ಜಿ.ಪರಮೇಶ್ವರ, ಎಂ.ಬಿ.ಪಾಟೀಲ, ಬಿ.ಕೆ.ಹರಿಪ್ರಸಾದ್, ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.