
88 ವರ್ಷದ ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ (Pope Francis) ಅವರಿಗೆ ಬ್ರಾಂಕೈಟಿಸ್ ಮತ್ತು ಮೂತ್ರಪಿಂಡದ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಹೆಚ್ಚಿನ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದು, ಪೋಪ್ ಪ್ರಜ್ಞಾವಸ್ಥೆಯಲ್ಲಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಫೆಬ್ರವರಿ 14 ರಂದು ರೋಮ್‌ನ ಜೆಮೆಲ್ಲಿ ಆಸ್ಪತ್ರೆಗೆ ದಾಖಲಿಸಲಾದ ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಗಂಭೀರವಾಗಿದ್ರೂ, ಅವರು ಪ್ರಜ್ಞಾವಸ್ಥೆಯಲ್ಲಿದ್ದಾರೆ. ವ್ಯಾಟಿಕನ್ ವರದಿ ಪ್ರಕಾರ, ಪೋಪ್‌ಗೆ ಹೆಚ್ಚುವರಿ ಆಮ್ಲಜನಕದ ಅವಶ್ಯಕತೆ ಇದೆ.
ಇಡೀ ಕ್ಯಾಥೋಲಿಕ್ ಸಮುದಾಯ ಮತ್ತು ಪ್ರಪಂಚದಾದ್ಯಂತದ ಜನರು ಪೋಪ್ ಫ್ರಾನ್ಸಿಸ್ ಅವರ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.











