Bengaluru: ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ (Street Vendors) ಗುರುತಿನ ಚೀಟಿ (Identity Card) ನೀಡುವ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಂದಾಗಿದೆ.
BBMP ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ಬೀದಿ ಬದಿ ವ್ಯಾಪಾರಿಗಳನ್ನು ಸಮೀಕ್ಷೆ ಮೂಲಕ ಗುರುತಿಸಿ ಅವರಿಗೆ ಶೀಘ್ರ ಗುರುತಿನ ಚೀಟಿ ವಿತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸೋಮವಾರ (ಮಾರ್ಚ್ 03) ನಡೆದ ಸಭೆಯಲ್ಲಿ, BBMP ವ್ಯಾಪ್ತಿಯ ಎಂಟು ವಲಯಗಳಲ್ಲಿ ಸುಮಾರು 27,000 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಅವರಿಗಾಗಿ ಗುರುತಿನ ಚೀಟಿಗಳನ್ನು ಶೀಘ್ರ ವಿತರಣೆ ಮಾಡಬೇಕು ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.
ಗುರುತಿನ ಚೀಟಿ ವಿತರಿಸಿದ ನಂತರ, ವ್ಯಾಪಾರ ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲಕರ ಪರಿಸ್ಥಿತಿ ಒದಗಿಸುವಂತೆ ಅವರು ಸೂಚಿಸಿದರು.
ಅದರ ಜೊತೆಗೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸುವ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.