Washington: ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (US President Donald Trump) ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Ukrainian President Volodymyr Zelensky) ನಡುವೆ ಅಮೆರಿಕದ ಓವಲ್ ಕಚೇರಿಯಲ್ಲಿ ನಡೆದ ಮಾತುಕತೆ ಬಳಿಕ, ಟ್ರಂಪ್ ಉಕ್ರೇನ್ ವಿರುದ್ಧ ಕೋಪಗೊಂಡಿದ್ದಾರೆ.
ಉಕ್ರೇನ್‌ಗೆ ನೀಡಲಾಗುತ್ತಿದ್ದ ಎಲ್ಲಾ ಮಿಲಿಟರಿ ನೆರವನ್ನು ಸ್ಥಗಿತಗೊಳಿಸಲು ಟ್ರಂಪ್ ಆದೇಶಿಸಿದ್ದಾರೆ. ಈ ನಿರ್ಧಾರದಿಂದ ಝೆಲೆನ್ಸ್ಕಿಯ ಮೇಲೆ ಒತ್ತಡ ಹೆಚ್ಚಾಗಿದೆ.
ಈ ಕ್ರಮ ಉಕ್ರೇನ್ ರಷ್ಯಾದೊಂದಿಗೆ ಶಾಂತಿ ಮಾತುಕತೆ ನಡೆಸುವಂತೆ ಒತ್ತಾಯಿಸುವ ಟ್ರಂಪ್ ಯತ್ನವೆಂದು ವಿಶ್ಲೇಷಿಸಲಾಗುತ್ತಿದೆ. ಶ್ವೇತಭವನದಲ್ಲಿ ನಡೆದ ಈ ಮಾತುಕತೆಯ ಕೆಲವೇ ದಿನಗಳಲ್ಲಿ ಅಮೆರಿಕಾ ಈ ತೀರ್ಮಾನ ಕೈಗೊಂಡಿದೆ.