Bengaluru: ಸಿಸಿಬಿ (CCB) ಮಾದಕದ್ರವ್ಯ ನಿಗ್ರಹದಳ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ, 17 ಲಕ್ಷ ಮೌಲ್ಯದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಡ್ರಗ್ (Drugs) ಪೆಡ್ಲರ್ ಗಳನ್ನು ಬಂಧಿಸಿದೆ. ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತರು. ಇವರ ಬಳಿ 108 ಗ್ರಾಂ ಎಂಡಿಎಂಎ ಮತ್ತು ಎರಡು ಮೊಬೈಲ್ಗಳು ಜಪ್ತಿ ಮಾಡಲಾಗಿದೆ.
ಬಂಧಿತರು ಮುಂಬೈನಿಂದ ಮಾದಕ ದ್ರವ್ಯ ತಂದು ಪರಿಚಿತರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬಂದಿದ್ದ ಇವರ ವಿರುದ್ಧ ಈ ಮೊದಲು ಸಹ ಡ್ರಗ್ಸ್ ಮಾರಾಟ ಆರೋಪವಿತ್ತು. ಜೈಲಿನಿಂದ ಬಿಡುಗಡೆಗೊಂಡ ನಂತರ, ಮತ್ತೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.