ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ (Champions Trophy Semi-Final) ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯ ದುಬೈನಲ್ಲಿ ನಡೆಯುತ್ತಿದೆ. ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿ ಸೆಮಿಫೈನಲ್ ಪ್ರವೇಶಿಸಿದ ಭಾರತ, ತನ್ನ ಅಜೇಯ ಓಟವನ್ನು ಮುಂದುವರೆಸಲು ಉತ್ಸುಕರಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಆಡಿದ ಅದೇ ತಂಡ ಸೆಮಿಫೈನಲ್‌ನಲ್ಲಿ ಕಣಕ್ಕಿಳಿಯಲಿದೆ. ವೇಗದ ಬೌಲಿಂಗ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಸೇರಿಕೊಂಡಿದ್ದಾರೆ. ವರುಣ್ ಚಕ್ರವರ್ತಿ ಮತ್ತು ಕುಲ್ದೀಪ್ ಯಾದವ್ ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಅವಕಾಶ ಪಡೆದಿದ್ದಾರೆ. ಆಲ್ರೌಂಡರ್ ಆಗಿ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.
ಭಾರತದ ಬ್ಯಾಟಿಂಗ್ ಶಕ್ತಿಗೆ ಕಡಿವಾಣ ಹಾಕಲು ಆಸ್ಟ್ರೇಲಿಯಾ, ಭಾರತೀಯ ಮೂಲದ ಬೌಲರ್ ತನ್ವೀರ್ ಸಂಘ ಅವರಿಗೆ ಅವಕಾಶ ನೀಡಿದೆ. ಇವರು ಈಗಾಗಲೇ ಆಸ್ಟ್ರೇಲಿಯಾ ಪರ ಏಕದಿನ ಕ್ರಿಕೆಟ್‌ನಲ್ಲಿ ಆಟವಾಡಿದ್ದಾರೆ.
ಭಾರತದ ತಂಡ: ನಾಯಕ: ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.
ಆಸ್ಟ್ರೇಲಿಯಾ ತಂಡ: ನಾಯಕ: ಸ್ಟೀವನ್ ಸ್ಮಿತ್, ಕೂಪರ್ ಕಾನೊಲಿ, ಟ್ರಾವಿಸ್ ಹೆಡ್, ಮಾರ್ನಸ್ ಲಂಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್ವೆಲ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಆಡಮ್ ಜಂಪಾ, ತನ್ವೀರ್ ಸಂಘ.