Bengaluru: ಕೆಂಪು ಮೆಣಸಿನಕಾಯಿಗೆ (Red chilly) ತುರ್ತಾಗಿ ಬೆಲೆ ಕೊರತೆ ಪಾವತಿ ಯೋಜನೆ (PDP) ದರ ನಿಗದಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿನ ರೈತರು ಕೆಂಪು ಮೆಣಸಿನಕಾಯಿ ಬೆಳೆದಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿರುವುದರಿಂದ ಅವರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಕಾರಣದಿಂದಾಗಿ ಕೂಡಲೇ ಪಿಡಿಪಿ ದರ ನಿಗದಿ ಮಾಡಬೇಕೆಂದು ಸಿಎಂ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಪತ್ರದಲ್ಲಿ ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಆಂಧ್ರಪ್ರದೇಶದಲ್ಲಿ (ಗುಂಟೂರು ಮೆಣಸಿನಕಾಯಿ) ಎಂಐಎಸ್ ಅಡಿಯಲ್ಲಿ ಪಿಡಿಪಿ ಯೋಜನೆ ಜಾರಿಯಾಗಿದೆ. ಆದರೆ ಕರ್ನಾಟಕದ ರೈತರಿಗೆ ಈ ಸೌಲಭ್ಯ ಇಲ್ಲ.
ಕರ್ಣಾಟಕ ಕೃಷಿ ದರ ಆಯೋಗದ ಪ್ರಕಾರ, ಕ್ವಿಂಟಲ್ಗೆ ₹12,675 ವೆಚ್ಚ ತಗಲುತ್ತದೆ. ಆದರೆ ಮಾರುಕಟ್ಟೆಯಲ್ಲಿ ₹28,300ಕ್ಕಿಂತ ಕಡಿಮೆ ದರಕ್ಕೆ ಮಾರಾಟವಾಗುತ್ತಿದೆ, ಇದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹಲವಾರು ಸಣ್ಣ ರೈತರು ಕೆಂಪು ಮೆಣಸಿನಕಾಯಿ ಬೆಳೆದಿದ್ದಾರೆ. ಅವರಿಗೆ ಸಹಾಯ ಮಾಡುವುದಕ್ಕಾಗಿ ಪಿಡಿಪಿ ಯೋಜನೆಯನ್ನು ಕರ್ನಾಟಕಕ್ಕೂ ವಿಸ್ತರಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.