
Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೇಣುಕಾಚಾರ್ಯರ ಜಯಂತಿ (Renukacharya Jayanthi) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವೀರಶೈವ ಧರ್ಮದ ಗುರುಗಳಲ್ಲಿ ಅಗ್ರ ಗಣ್ಯರಾದ ಜಗದ್ಗುರು ರೇಣುಕಾಚಾರ್ಯರ ತತ್ವ ಬೋಧನೆಗಳು, ಬದುಕಿನ ಚರಿತ್ರೆ ಮತ್ತು ಸಾಮಾಜಿಕ ಪರಿವರ್ತನೆಯ ಸಾಧನೆಗಳು ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನ ಪಡೆದಿವೆ ಎಂದು ತಿಳಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಎನ್. ಭಾಸ್ಕರ್, ಇಷ್ಟಲಿಂಗ ಧಾರಣೆಯ ಮೂಲಕ ಭಗವಂತನನ್ನು ವೈಯಕ್ತಿಕ ಅನುಭವದ ಮೂಲಕ ಅರಿತುಕೊಳ್ಳಬೇಕು ಎನ್ನುವ ತತ್ವವನ್ನು ಪ್ರಚಾರ ಮಾಡಿದ ರೇಣುಕಾಚಾರ್ಯರು ಶೈವ ತತ್ವಶಾಸ್ತ್ರವನ್ನು ಜನಸಾಮಾನ್ಯರಿಗೆ ತಲುಪಿಸಲು ಹಾಗೂ ಅದನ್ನು ದೈನಂದಿನ ಜೀವನದ ಭಾಗವನ್ನಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು.
ವಕೀಲೆ ಪ್ರಭಾ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ಸಮುದಾಯದ ಮುಖಂಡರಾದ ಮಹೇಶ್ ಬಸವಪುರ, ರಾಜೇಂದ್ರ ಪ್ರಸಾದ್, ಗಂಗಾಧರ, ಮೋಹನ್ ಕುಮಾರ್, ಸುನಿಲ್, ಸೋಮಶೇಖರ್, ಮಹಲಿಂಗಯ್ಯ, ನಾಗರಾಜ್, ಗೀತಾ ಬಸವರಾಜ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.