Search
WhatsApp alerts

Home › Chikkaballapura

ನಂದಿಗಿರಿಧಾಮಕ್ಕೆ ವಾರದ ದಿನಗಳಲ್ಲಿ ಪ್ರವೇಶಕ್ಕೆ ನಿರ್ಬಂಧ

administrator · Published

Chikkaballapur : ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ತಾಲೂಕಿನ ನಂದಿಗಿರಿಧಾಮಕ್ಕೆ (Nandihills) ಮಾರ್ಚ್ 24 ರಿಂದ ಏಪ್ರಿಲ್ 25ರವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದ್ದು (entry restriction) ಶನಿವಾರ ಮತ್ತು ಭಾನುವಾರ ಮಾತ್ರ ಪ್ರವಾಸಿಗರು ಪ್ರವೇಶ ಮಾಡಬಹುದು.

ಗಿರಿಧಾಮದ ಆರಂಭದಿಂದ 7.70 ಕಿ.ಮೀ ವರೆಗೆ ರಸ್ತೆಯ ಪುನರ್‌ನವೀಕರಣ ಕೆಲಸ ನಡೆಯುತ್ತಿದೆ. ಈ ರಸ್ತೆಯು ಕಿರಿದಾಗಿದ್ದು, ಅಪಾಯಕಾರಿ ತಿರುವುಗಳನ್ನು ಒಳಗೊಂಡಿದೆ. ಆದ್ದರಿಂದ, ಡಾಂಬರ್ ಹಾಕಲು ರಸ್ತೆ ಸಂಚಾರವನ್ನು ಒಂದು ತಿಂಗಳ ಕಾಲ ನಿರ್ಬಂಧಿಸುವಂತೆ ಗುತ್ತಿಗೆದಾರರು ವಿನಂತಿಸಿದ್ದಾರೆ.

ರಸ್ತೆ ಕಾಮಗಾರಿ ಕಾರಣ ಸಂಚಾರ ನಿರ್ಬಂಧದ ಬಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸಹ ಕೋರಿಕೆ ಸಲ್ಲಿಸಿದ್ದರು. ಈ ಎಲ್ಲಾ ಸೂಚನೆಗಳನ್ನು ಪರಿಗಣಿಸಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರವೇಶ ನಿರ್ಬಂಧದ ಆದೇಶ ಹೊರಡಿಸಿದ್ದಾರೆ. ಸುಲ್ತಾನ್‌ಪೇಟೆ ಕಡೆಯಿಂದ ನಂದಿಗಿರಿಧಾಮಕ್ಕೆ ಮೆಟ್ಟಿಲುಗಳ ಮೂಲಕ ತೆರಳಬಹುದು. ರಸ್ತೆ ಮೂಲಕ ಗಿರಿಧಾಮ ಪ್ರವೇಶ ನಿರ್ಬಂಧವಾಗಿರುವ ಕಾರಣ ಇಲ್ಲಿ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ.

For Daily Updates WhatsApp ‘HI’ to 7406303366

The post ನಂದಿಗಿರಿಧಾಮಕ್ಕೆ ವಾರದ ದಿನಗಳಲ್ಲಿ ಪ್ರವೇಶಕ್ಕೆ ನಿರ್ಬಂಧ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page