Bengaluru: “ಮೀಸಲು ಧರ್ಮಾಧಾರಿತವಲ್ಲ, (Muslim reservation) ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ ಮತ್ತು ನಿಂತಿರಬೇಕು” ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಈ ಮೂಲಕ, ಮುಸ್ಲಿಮರಿಗೆ 4% ಗುತ್ತಿಗೆ ಮೀಸಲಾತಿ ನೀಡಿದ ಕಾಂಗ್ರೆಸ್ ಸರಕಾರದ ನಿರ್ಧಾರದ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿ ಹೋರಾಟ ನಡೆಸುತ್ತಿದೆಯಾ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
HD ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಮೂಲಕ, “ಜೆಡಿಎಸ್ ಮತ್ತು ಬಿಜೆಪಿ ನಡುವೆ ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ಕೆಲವು ಪತ್ರಿಕೆಗಳು ಹಾಗೂ ಸುದ್ದಿವಾಹಿನಿಗಳು ತರುತ್ತಿರುವ ವರದಿಗಳು ಸುಳ್ಳು” ಎಂದು ಹೇಳಿದ್ದಾರೆ.
ವಿಧಾನಮಂಡಲ ಅಧಿವೇಶನದ ಮೊದಲೇ ಬೆಂಗಳೂರಿನಲ್ಲಿ ನಡೆದ NDA ‘ಸಮನ್ವಯ ಸಮಿತಿ’ ಸಭೆಯಲ್ಲಿ ಎಲ್ಲ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆದಿತ್ತು. “ನಾನೂ ಆ ಸಭೆಯಲ್ಲಿ ಭಾಗವಹಿಸಿದ್ದೆ. ಸರ್ಕಾರದ ವಿರುದ್ಧ ಹೋರಾಟಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.
“ಕಾಂಗ್ರೆಸ್ ಸರಕಾರ ಮತಬ್ಯಾಂಕ್ ರಾಜಕೀಯಕ್ಕಾಗಿ ಮೀಸಲಾತಿಯನ್ನು ವಕ್ರೋಕ್ತಗೊಳಿಸುತ್ತಿದೆ. ರಾಜ್ಯದ ಜನತೆಯ ಗಮನ ಬೇರೆಡೆ ತಿರುಗಿಸಲು ಮೀಸಲಾತಿಯನ್ನು ಓಲೈಕೆ ಅಸ್ತ್ರವನ್ನಾಗಿ ಬಳಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಈ ನೀತಿಯನ್ನು ಅನುಸರಿಸುತ್ತಿದೆ ಮತ್ತು ಅದು “ಮೀಸಲು ಅರಾಜಕತೆ” ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
“ಜೆಡಿಎಸ್ ಮತ್ತು ಬಿಜೆಪಿ ಈಗಾಗಲೇ ಹಲವಾರು ಜನಪರ ಹೋರಾಟಗಳಲ್ಲಿ ಒಟ್ಟಾಗಿ ನಿಂತಿವೆ. ಮುಂದೆ ಸಹ ಹೋರಾಟ ಮುಂದುವರಿಯುತ್ತದೆ. ಆದರೆ, ಒಂದು ಸಮುದಾಯವನ್ನು ಮೆಚ್ಚಿಸಲು ಬೇರೊಂದು ಸಮುದಾಯವನ್ನು ಕಡೆಗಣಿಸುವುದು ನ್ಯಾಯಸಮ್ಮತವಲ್ಲ” ಎಂದು ಅವರು ತಿಳಿಸಿದ್ದಾರೆ.
“ಮೀಸಲು ಧರ್ಮಾಧಾರಿತವಲ್ಲ, ಅದು ಕೇವಲ ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಇರುವ ವ್ಯವಸ್ಥೆ. ಆದರೆ, ಈಗ ತುಷ್ಟೀಕರಣ VS ತುಚ್ಚೀಕರಣ ನಡೆಯುತ್ತಿದೆ. ಇದು ಸಂವಿಧಾನ ವಿರೋಧಿ” ಎಂದು ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.