ಗುಜರಾತ್‌ನ ಜಾಮ್‌ನಗರದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನಕ್ಕೀಡಾಗಿ, ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೈಲಟ್ ರಕ್ಷಿಸಲ್ಪಟ್ಟಿದ್ದಾರೆ ಎಂದು ಜಾಮ್‌ನಗರ ಎಸ್‌ಪಿ ಪ್ರೇಮ್‌ಸುಖ್ ದೇಲುತಿಳಿಸಿದ್ದಾರೆ.
ಅಪಘಾತದ ಸಂದರ್ಭ, ಒಬ್ಬ ಪೈಲಟ್ ವಿಮಾನದಿಂದ ಜಿಗಿದರೆ, ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಪೈಲಟ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ದೋಷವೇ ಅಪಘಾತದ ಪ್ರಮುಖ ಕಾರಣವೆಂದು ಶಂಕಿಸಲಾಗಿದೆ.
ಘಟನೆ ಜಾಮ್‌ನಗರದಿಂದ 12 ಕಿ.ಮೀ ದೂರದ ಸುವರ್ದಾ ಗ್ರಾಮದ ಬಳಿ ನಡೆದಿದೆ. ಈ ಅಪಘಾತದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬೆಂಕಿ ಹೊತ್ತಿಕೊಂಡ ಹೊಲದ ದೃಶ್ಯಗಳು ಕಾಣಿಸಿಕೊಂಡಿವೆ.