back to top
25.4 C
Bengaluru
Wednesday, July 23, 2025
HomeChikkaballapuraGauribidanurಗೌರಿಬಿದನೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಸಭೆ

ಗೌರಿಬಿದನೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಸಭೆ

- Advertisement -
- Advertisement -

Gauribidanur : ನಗರದ ಪ್ರಜಾಸೌಧ ಆವರಣದಲ್ಲಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಬಂಧಪಟ್ಟಾಗಿ ಮಹತ್ವದ ಸಭೆ ನಡೆಯಿತು. ತಾಲ್ಲೂಕು ಆಡಳಿತ, ರಾಷ್ಟೀಯ ಹೆದ್ದಾರಿ ಪ್ರಾಧಿಕಾರ (NHAI), ರೈತ ಸಂಘ, ಕಂದಾಯ ಇಲಾಖೆ, ಭೂ ಮಾಪನ ಇಲಾಖೆ, ಎಸ್‌ಎಲ್ಒ ಮತ್ತು ಕೆಆರ್‌ಡಿಐಎಲ್ ಸಂಯುಕ್ತಾಶ್ರಯದಲ್ಲಿ ಈ ಸಭೆ ಆಯೋಜಿಸಲಾಗಿತ್ತು.

ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಅವರು, “ನಗರದ ಕೆಲವು ಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಆದರೆ ತಕ್ಷಣ ಪೋಡಿ ಮಾಡದ ಕಾರಣ ಪಹಣಿಗಳಲ್ಲಿ ತಿದ್ದುಪಡಿ ಕಾಣಿಸಿಕೊಂಡಿದೆ. ಭೂ ಮಾಪನ ಮತ್ತು ಕಂದಾಯ ಇಲಾಖೆಗೆ ಇನ್ನೂ 2-3 ದಿನಗಳಲ್ಲಿ ರೈತರ ಜಮೀನು ಪೋಡಿ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ,” ಎಂದು ತಿಳಿಸಿದರು.

ಗುಂಡಾಪುರ ಮತ್ತು ಮಾದನಹಳ್ಳಿ ಭಾಗದಲ್ಲಿ ಹೆದ್ದಾರಿ ಕಾಮಗಾರಿ ಜೋರಾಗಿ ನಡೆಯುತ್ತಿರುವುದರಿಂದ ಅಲ್ಲಿನ ಪಕ್ಕದ ಸಂಪರ್ಕ ರಸ್ತೆಗಳನ್ನು ಬಳಸದ ಜನರಿಗೆ ತೊಂದರೆ ಉಂಟಾಗಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆAlready ದೂರು ಸಲ್ಲಿಸಲಾಗಿದ್ದು, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಅವೈಜ್ಞಾನಿಕವಾಗಿ ನಿರ್ಮಿತ ಉಬ್ಬುಗಳನ್ನು ತೆರವುಗೊಳಿಸಿ, ಹೈ ಮಾಸ್ ದೀಪಗಳು ಹಾಗೂ ಡೈರೆಕ್ಷನ್ ಬೋರ್ಡುಗಳನ್ನು ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್ ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ಮಲ್ಲಿಕಾರ್ಜುನ್, ಭೂ ದಾಖಲೆಗಳ ಅಧಿಕಾರಿ ಲಿಖಿತ, ಕೆಆರ್‌ಐಡಿಎಲ್‌ನ ನಾಗರಾಜ್, ರವಿಕುಮಾರ್ (ಹಸಿರು ಸೇನೆ), ರೈತ ಸಂಘದ ತಾಲ್ಲೂಕು ಅಧ್ಯಕ್ಷ ಲೋಕೇಶ್ ಗೌಡ, ಹಿರೇಬಿದನೂರು ರಾಜಣ್ಣ, ಚೀಕಟಗೆರೆ ಶ್ರೀನಿವಾಸ್ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸರಾಗವಾಗಿ ಸಾಗುವುದರೊಂದಿಗೆ ರೈತರು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮುಂದಿನ ದಿನಗಳಲ್ಲಿ ಎಲ್ಲಾ ಇಲಾಖೆಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲಿವೆ ಎಂದು ಸಭೆಯಲ್ಲಿ ತಿಳಿಸಲಾಯಿತು.

For Daily Updates WhatsApp ‘HI’ to 7406303366

The post ಗೌರಿಬಿದನೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಸಭೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page