back to top
25.3 C
Bengaluru
Wednesday, July 23, 2025
HomeKarnatakaಐತಿಹಾಸಿಕ ನಂದಿ ಬೆಟ್ಟದಲ್ಲಿ ಇಂದು Cabinet Meeting

ಐತಿಹಾಸಿಕ ನಂದಿ ಬೆಟ್ಟದಲ್ಲಿ ಇಂದು Cabinet Meeting

- Advertisement -
- Advertisement -

ಚಿಕ್ಕಬಳ್ಳಾಪುರ: ಐತಿಹಾಸಿಕ ನಂದಿ ಬೆಟ್ಟದಲ್ಲಿ (Nandi Hills) ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ (Cabinet meeting) ನಡೆಯಲಿದೆ. ಈ ಸಭೆಯಲ್ಲಿ ಮುಖ್ಯವಾಗಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ 10 ಗಂಟೆಗೆ ನಂದಿ ಬೆಟ್ಟಕ್ಕೆ ಆಗಮಿಸುತ್ತಾರೆ. ಮೊದಲು ಅವರು ಭೋಗ ನಂದೀಶ್ವರ ದೇವಾಲಯದಲ್ಲಿ ದರ್ಶನ ಪಡೆಯಲಿದ್ದು, ಬಳಿಕ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಂದಿ ಬೆಟ್ಟಕ್ಕೆ ಬಸ್ಸಿನಲ್ಲಿ ತೆರಳುತ್ತಾರೆ.

ಈ ಸಭೆಗಾಗಿ ಭದ್ರತೆ ಹಾಗೂ ವ್ಯವಸ್ಥೆಗಳನ್ನು ಪರಿಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್, ಜಿಲ್ಲಾಧಿಕಾರಿ ರವೀಂದ್ರ ಹಾಗೂ ಎಸ್‌ಪಿ ಕುಶಾಲ್ ಚೌಕ್ಸೆ ಮುಂತಾದವರು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ನೋಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಸುಧಾಕರ್ ಅವರು, ನಂದಿ ಬೆಟ್ಟದಲ್ಲಿ ಇದೇ ಮೊದಲ ಬಾರಿ ಸಂಪುಟ ಸಭೆ ನಡೆಯುತ್ತಿದೆ ಎಂದರು. ಅವರು ತಿಳಿಸಿದಂತೆ, ಮುಂಚಿತವಾಗಿ ಇದೇ ಸಭೆಯನ್ನು ಜೂನ್ 19ರಂದು ನಿಗದಿಪಡಿಸಲಾಗಿತ್ತು. ಆದರೆ, ಸಿದ್ಧತೆಗಳು ಪೂರ್ಣವಾಗಿರಲಿಲ್ಲ ಮತ್ತು ಕೆಲವು ಯೋಜನೆಗಳಿಗೆ ಮಂಜೂರಾತಿ ಆಗಿಲ್ಲದ ಕಾರಣ ಅದು ರದ್ದುಪಡಿಸಲಾಗಿತ್ತು.

ಸಚಿವ ಸಂಪುಟ ಸಭೆಗೆ ಸಂಬಂಧಿಸಿದಂತೆ ನಂದಿ ಬೆಟ್ಟಕ್ಕೆ ಹೆಚ್ಚಿನ ಖಾಸಗಿ ವಾಹನಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸಭೆಯ ನಂತರ ಸಚಿವರು ನಿರ್ಗಮಿಸಲು ವಾಹನದ ವ್ಯವಸ್ಥೆ ಬೇಕಿರುವುದರಿಂದ ನಿಲುಗಡೆ ಜಾಗದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ವಾಹನಗಳಿಗೆ ಅವಕಾಶ ಇಲ್ಲ ಎಂದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page