Delhi: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಶಾಂಘೈ ಸಹಕಾರ ಸಂಸ್ಥೆಯ (SCO) ಶೃಂಗಸಭೆಯಲ್ಲಿ ಭಾಗವಹಿಸಲು ಆಗಸ್ಟ್ ತಿಂಗಳಲ್ಲಿ ಚೀನಾಕ್ಕೆ ತೆರಳುವ ಸಾಧ್ಯತೆ ಇದೆ. ಈ ಶೃಂಗಸಭೆ ಆಗಸ್ಟ್ 31ರಿಂದ ಸೆಪ್ಟೆಂಬರ್ 1ರ ವರೆಗೆ ನಡೆಯಲಿದೆ.
ಭಾರತ ಮತ್ತು ಚೀನಾ ನಡುವಿನ ಬಿಕ್ಕಟ್ಟಿನ ಸಂಬಂಧಗಳನ್ನು ಸುಧಾರಿಸಲು ವಿವಿಧ ಮಟ್ಟದಲ್ಲಿ ಚಟುವಟಿಕೆಗಳು ನಡೆಯುತ್ತಿವೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇತ್ತೀಚೆಗೆ ಚೀನಾಕ್ಕೆ ಭೇಟಿ ನೀಡಿ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾಗಿ ಪ್ರಮುಖ ವಿಚಾರಗಳನ್ನು ಚರ್ಚಿಸಿದರು. ವ್ಯಾಪಾರ, ಆರ್ಥಿಕ ಸಹಕಾರ ಮತ್ತು ಗಡಿಭಾಗದ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಯಿತು.
2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ರಕ್ತಸಿಕ್ತ ಘರ್ಷಣೆಯಿಂದಾಗಿ ಭಾರತ-ಚೀನಾ ನಡುವಿನ ಸಂಬಂಧ ಬಹಳ ಕುಲೈಸಿತ್ತು. ಆ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಕೆಲವು ವರದಿಗಳ ಪ್ರಕಾರ, ಚೀನಾಕೂ 40ಕ್ಕೂ ಹೆಚ್ಚು ಸೈನಿಕರ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇದೆ, ಆದರೂ ಚೀನಾ ಇದರ ಬಗ್ಗೆ ಅಧಿಕೃತವಾಗಿ ಏನೂ ಹೇಳಿರಲಿಲ್ಲ.
ಈ ನಡುವೆ ಪ್ರಧಾನಿ ಮೋದಿ ಅವರು ಶೃಂಗಸಭೆ ಸಂದರ್ಭ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ. ಇದುವರೆಗೆ ಅವರು ಕಜನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಕೊನೆಯದಾಗಿ ಭೇಟಿಯಾಗಿದ್ದರು. ಮೋದಿ ಈ ವೇಳೆ ರಷ್ಯಾ ಸೇರಿದಂತೆ ಇತರ SCO ಸದಸ್ಯ ರಾಷ್ಟ್ರದ ನಾಯಕರೊಂದಿಗೆ ಸಹ ಮಾತುಕತೆ ನಡೆಸಬಹುದು.
ಇಂತಹ ಭೇಟಿಗಳಿಂದ ಭಾರತ ಮತ್ತು ಚೀನಾ ನಡುವಿನ ಸಂಬಂಧ ಹತ್ತಿರವಾಗಲು ಸಾಧ್ಯವಿದೆ ಎಂಬ ನಿರೀಕ್ಷೆಯಿದೆ.