
Chikkaballapur : ಬಾಗೇಪಲ್ಲಿಯಿಂದ ಚಿತ್ರಾವತಿ ನದಿಗೆ ಕೊಳಚೆ ನೀರು ಸೇರುವ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಸರ್ಕಾರವು ಅಮೃತ–2 ಯೋಜನೆಯಡಿ ₹3.5 ಕೋಟಿ ಅನುದಾನವನ್ನು ಮಂಜೂರು ಮಾಡಿದೆ. ಈ ಕಾಮಗಾರಿ ಈಗ ಟೆಂಡರ್ ಹಂತದಲ್ಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ (PN Ravindra) ಮಾಹಿತಿ ನೀಡಿದರು. ತಾತ್ಕಾಲಿಕವಾಗಿ ನಿರೋಧಕ ಕ್ರಮಗಳನ್ನು ಕೂಡ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ರೈತರ ಸಮಸ್ಯೆಗಳ ಪರಿಹಾರ ಸಭೆಯಲ್ಲಿ ವಿವಿಧ ಬೇಡಿಕೆಗಳು ಮತ್ತು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಕುಡಿಯುವ ನೀರಿನ ಅಭಾವ, ರಾಜಕಾಲುವೆಗಳ ತ್ಯಾಜ್ಯ ಶುದ್ಧೀಕರಣ, ಹಾಗೂ ಸರ್ಕಾರದ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ಎಂಬಂತ ವಿಚಾರಗಳನ್ನು ರೈತ ಮುಖಂಡರು ಮುಡಿಪಾಗಿಟ್ಟು, ತಕ್ಷಣ ಹಾಗೂ ಕಾಲಬದ್ಧ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
2025–26ರ ಬೆಳೆ ವಿಮಾ ಯೋಜನೆಯಡಿ ಮಾವು, ದ್ರಾಕ್ಷಿ, ದಾಳಿಂಬೆ ಬೆಳೆಗಳಿಗೆ ವಿಮಾ ಸೌಲಭ್ಯ ಲಭ್ಯವಿದೆ ಎಂದು ತಿಳಿಸಲಾಯಿತು. ಚೇಳೂರು ಪಟ್ಟಣವನ್ನು ಪಟ್ಟಣ ಪಂಚಾಯಿತಿಯಾಗಿ ಘೋಷಿಸಲು, ಬಗರ್ ಹುಕುಂ ಅರ್ಜಿಗಳನ್ನು ವಿಲೇವಾರಿ ಮಾಡಲು ಮತ್ತು ಬಡ ರೈತರಿಗೆ ನಿವೇಶನ ನೀಡಲು ರೈತ ಮುಖಂಡರು ಆಗ್ರಹಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ, ಸೇರಿದಂತೆ ಹಲವಾರು ಇಲಾಖೆಗಳಿಂದ ಅಧಿಕಾರಿಗಳು ಹಾಗೂ ರೈತ ಸಂಘದ ಪ್ರಮುಖರು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post ಚಿತ್ರಾವತಿ ನದಿಗೆ ಕೊಳಚೆ ನೀರು ಸೇರದಂತೆ ಶಾಶ್ವತ ಪರಿಹಾರ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.