Karwar: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಯಾವಾಗ ಸಿಗುತ್ತದೆ ಎಂದು ಮಹಿಳಾ ಪತ್ರಕರ್ತೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ನೀಡಿದ ಉತ್ತರ ದೊಡ್ಡ ವಿವಾದಕ್ಕೆ ಕಾರಣವಾಗಿದೆ.
ಪತ್ರಕರ್ತೆ ಕೇಳಿದ ಪ್ರಶ್ನೆಗೆ ದೇಶಪಾಂಡೆ, “ನಿನಗೆ ಹೆರಿಗೆ ಆಗಬೇಕೇ? ಹೇಳು, ಮಾಡಿಸಿ ಕೊಡುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.
ಈ ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಟೀಕಿಸಿದ್ದು, ಇದು ಮಹಿಳೆಯರ ಅವಮಾನ ಹಾಗೂ ಸ್ತ್ರೀದ್ವೇಷದ ಸಂಸ್ಕೃತಿ ಎಂದು ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ದೇಶಪಾಂಡೆ ಮಾತುಗಳು ಅವರ ವಯಸ್ಸು ಮತ್ತು ಸ್ಥಾನಕ್ಕೆ ತಕ್ಕದ್ದಲ್ಲ ಎಂದು ಹೇಳಿ, ಅವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ವಕ್ತಾರ ಶಹಜಾದ್ ಪೂನವಾಲಾ ಕೂಡ ದೇಶಪಾಂಡೆ ಹೇಳಿಕೆ ಮೇಲೆ ಕಿಡಿಕಾರಿದ್ದಾರೆ.
ಆರ್.ವಿ. ದೇಶಪಾಂಡೆ ಅವರು ಕಾಂಗ್ರೆಸ್ ಪಕ್ಷದಿಂದ 8 ಬಾರಿ ಶಾಸಕರಾಗಿದ್ದಾರೆ ಮತ್ತು ಒಮ್ಮೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪಡೆದಿದ್ದಾರೆ.