New Delhi: ಉಕ್ರೇನ್ (Ukraine) ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ನಿಲ್ಲಿಸಲು ಭಾರತ ಪ್ರಮುಖ ಪಾತ್ರ ವಹಿಸಬಹುದು ಎಂದು ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹೇಳಿದ್ದಾರೆ.
ಅವರು ಹಾಗೂ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ, ಪ್ರಧಾನಿ ನರೇಂದ್ರ ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯೊಂದಿಗೆ ಭಾರತದ ನಿರಂತರ ಸಂಪರ್ಕವನ್ನು ಅವರು ಶ್ಲಾಘಿಸಿದ್ದಾರೆ. ಈ ಯುದ್ಧವು ಕೇವಲ ಯುರೋಪ್ಗೆ ಮಾತ್ರವಲ್ಲ, ಇಡೀ ಜಗತ್ತಿನ ಭದ್ರತೆ ಮತ್ತು ಆರ್ಥಿಕತೆಗೆ ಅಪಾಯ ಎಂದು ಎಚ್ಚರಿಸಿದ್ದಾರೆ.
ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತ-ಯುರೋಪಿಯನ್ ಒಕ್ಕೂಟದ ಸಹಕಾರವನ್ನು ಮೆಚ್ಚಿ, ಶೀಘ್ರದಲ್ಲೇ ಮುಕ್ತ ವ್ಯಾಪಾರ ಒಪ್ಪಂದ (FTA) ಮಾಡಲು ಇಬ್ಬರೂ ಒಪ್ಪಿಕೊಂಡಿದ್ದಾರೆ.
ಮುಂದಿನ ಭಾರತ-ಇಯು ಶೃಂಗಸಭೆ 2026ರಲ್ಲಿ ನಡೆಯಲಿದ್ದು, ಅದರಲ್ಲಿ ಹೊಸ ಕಾರ್ಯಯೋಜನೆಗಳನ್ನು ಘೋಷಿಸಲು ನಿರ್ಧಾರ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಇಬ್ಬರು ಯುರೋಪಿಯನ್ ನಾಯಕರನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ.