Search
WhatsApp alerts

Home › Business

ರಸ್ತೆ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ CM Siddaramaiah

administrator · Published

CM Siddaramaiah releases Rs 50 crore for road development

Bengaluru: ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ನೀಡುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಒಪ್ಪಿಗೆ ಸೂಚಿಸಿದ್ದಾರೆ. ಬುಧವಾರ ಬೆಂಗಳೂರಿನ ಶಾಸಕರೊಂದಿಗೆ ಸಭೆ ನಡೆಸಿದ ಸಿಎಂ, ರಸ್ತೆ ದುರಸ್ತಿ ಮತ್ತು ಹೊಸ ರಸ್ತೆ ನಿರ್ಮಾಣಕ್ಕೆ ಈ ಅನುದಾನವನ್ನು ಬಳಸುವಂತೆ ಸೂಚನೆ ನೀಡಿದರು.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಿಎಂ ಅವರು ಅನುದಾನ ಹಂಚಿಕೆ ಮತ್ತು ಶಾಸಕರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಈಗಾಗಲೇ ಮೂರು ಹಂತದಲ್ಲಿ ಸಭೆ ನಡೆಸಿದ್ದು, ಶಾಸಕರು ಮತ್ತು ಪರಿಷತ್ ಸದಸ್ಯರೊಂದಿಗೆ ಸಿಎಂ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ರಸ್ತೆ, ಒಳಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಅನುದಾನ ಒದಗಿಸುವ ಮೂಲಕ ಜನರ ಜೀವನಮಟ್ಟ ಸುಧಾರಣೆಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಮತ್ತು ಹಣ ಬಿಡುಗಡೆ ಮಾಡಲು ಕಾಮಗಾರಿ ವಿವರ ನೀಡುವಂತೆ ಎಲ್ಲಾ ಶಾಸಕರಿಗೆ ಸಿಎಂ ಪತ್ರ ಬರಹಿಸಿದ್ದಾರೆ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page