New Delhi: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಜ್ಞಾನ ಭಾರತಂ ಪೋರ್ಟಲ್ ಅನ್ನು (Gyan Bharatam Portal) ಉದ್ಘಾಟಿಸಿದರು. ಈ ಪೋರ್ಟಲ್ ಹಸ್ತಪ್ರತಿಗಳನ್ನು ಡಿಜಿಟಲ್ ರೂಪಕ್ಕೆ ಪರಿವರ್ತಿಸಿ, ಸಂರಕ್ಷಿಸಿ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಗುರಿ ಹೊಂದಿದೆ.
ಇದಕ್ಕೂ ಮುನ್ನ ವಿಜ್ಞಾನ ಭವನದಲ್ಲಿ ನಡೆದ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೂ ಹಾಜರಿದ್ದರು.
ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನವು ‘ಹಸ್ತಪ್ರತಿ ಪರಂಪರೆಯ ಮೂಲಕ ಭಾರತದ ಜ್ಞಾನ ಪರಂಪರೆಯನ್ನು ಮರಳಿ ಪಡೆಯುವುದು’ ಎಂಬ ವಿಷಯದಡಿ ನಡೆಯುತ್ತಿದೆ. ಇದರಲ್ಲಿ ಪ್ರಮುಖ ವಿದ್ವಾಂಸರು, ಸಂರಕ್ಷಣಾ ತಜ್ಞರು, ತಂತ್ರಜ್ಞರು ಮತ್ತು ನೀತಿ ರೂಪಿಸುವವರನ್ನು ಒಗ್ಗೂಡಿಸಲಾಗಿದೆ.