HomeKarnatakaಕ್ರೀಡಾಪಟುಗಳಿಗೆ ಸರ್ಕಾರದ ದೊಡ್ಡ ಉಡುಗೊರೆ – Pandit Venkatesh Kumar ಗೆ ರಾಜ್ಯ ಸಂಗೀತ ವಿದ್ವಾನ್...

ಕ್ರೀಡಾಪಟುಗಳಿಗೆ ಸರ್ಕಾರದ ದೊಡ್ಡ ಉಡುಗೊರೆ – Pandit Venkatesh Kumar ಗೆ ರಾಜ್ಯ ಸಂಗೀತ ವಿದ್ವಾನ್ ಗೌರವ

- Advertisement -
- Advertisement -

Mysuru: ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಉದ್ಘಾಟಿಸಿದ ಸಿಎಂ, 3,600 ಕ್ರೀಡಾಪಟುಗಳು ವಿವಿಧ ವಿಭಾಗಗಳಿಂದ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು. ಕ್ರೀಡಾಪಟುಗಳಿಗೆ ಸೋಲು-ಗೆಲುವಿಗಿಂತ ಕ್ರೀಡಾಮನೋಭಾವ ಮುಖ್ಯ ಎಂದು ಅವರು ಒತ್ತಿ ಹೇಳಿದರು.

ಕ್ರೀಡಾಪಟುಗಳಿಗೆ ನೆರವು

  • 60 ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ. ವಾರ್ಷಿಕ ಸಹಾಯಧನ
  • ಸರ್ಕಾರಿ ಉದ್ಯೋಗಗಳಲ್ಲಿ ಶೇ. 2 ಮೀಸಲು, ಪೊಲೀಸ್ ಇಲಾಖೆಯಲ್ಲಿ ಶೇ. 2-3 ಮೀಸಲು
  • ಒಲಿಂಪಿಕ್ಸ್ ಪದಕ ವಿಜೇತರಿಗೆ 6 ಕೋಟಿ ರೂ. ಬಹುಮಾನ

ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿದ್ದರು. ಸಮಾಜದ ಅಡೆತಡೆಗಳ ನಡುವೆಯೂ ಕುಸ್ತಿ ಕ್ರೀಡೆಯಲ್ಲಿ ಸಾಧನೆ ಮಾಡಿ, ಈಗ ಹರಿಯಾಣದಲ್ಲಿ ಶಾಸಕರಾಗಿದ್ದಾರೆ.

ಸಂಗೀತ ವಿದ್ವಾನ್ ಪ್ರಶಸ್ತಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಈ ವರ್ಷದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಬಡತನದಿಂದ ಬಂದರೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಗೀತ ಕ್ಷೇತ್ರಕ್ಕೆ ಕೀರ್ತಿ ತಂದ ಅವರು ಈ ಗೌರವಕ್ಕೆ ಅತ್ಯಂತ ಅರ್ಹರು ಎಂದು ಸಿಎಂ ಹೇಳಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!