back to top
26.7 C
Bengaluru
Tuesday, July 22, 2025
HomeKarnatakaTumakuruಆಜಾನ್‌ಗೆ ಪ್ರತಿಯಾಗಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ಪಠಣೆ

ಆಜಾನ್‌ಗೆ ಪ್ರತಿಯಾಗಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ಪಠಣೆ

- Advertisement -
- Advertisement -

Tumkur, Tumakuru : ಪಾವಗಡದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ (Pavagada Kote Anjaneya Swamy Temple) ಬಳಿ ಸೋಮವಾರ ಶ್ರೀರಾಮಸೇನೆ ಪದಾಧಿಕಾರಿಗಳು ಆಜಾನ್‌ಗೆ (Azaan) ಪ್ರತಿಯಾಗಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ (Hanuman Chalisa) ಪಠಿಸಿದರು. ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತೆಯಾಗಿ ದೇಗುಲದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು.

ಶ್ರೀರಾಮಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಕಾವಲಗೆರೆ ರಾಮಾಂಜಿ ಮಾತನಾಡಿ “ಸುಪ್ರೀಂ ಕೋರ್ಟ್‌ ಆದೇಶವನ್ನು ಮಸೀದಿಗಳಲ್ಲಿ ಪಾಲಿಸುವವರೆಗೂ ಬೆಳಿಗ್ಗೆ ಹಾಗೂ ರಾತ್ರಿ ಹನುಮಾನ್ ಚಾಲೀಸಾ ಪಠಿಸಲಾಗುವುದು. ಕಾನೂನು ಉಲಂಘಿಸಿದರೆ ಮುಂದಿನ ದಿನಗಳಲ್ಲಿ ಇಡೀ ತಾಲ್ಲೂಕಿನಾದ್ಯಂತ ಚಾಲೀಸಾ ಪಠಣವನ್ನು ವಿಸ್ತರಿಸಲಾಗುವುದು’ ಎಂದು ಹೇಳಿದರು.

ಶ್ರೀರಾಮಸೇನೆ ಪದಾಧಿಕಾರಿಗಳಾದ ಶೇಖರ್ ಬಾಬು, ಅಲಕುಂದಿ ರಾಜ್, ರಾಘವೇಂದ್ರ ಮತ್ತು ರಾಷ್ಟ್ರೀಯ ಹಿಂದೂ ಪರಿಷತ್ ಪದಾಧಿಕಾರಿಗಳಾದ ಅನಿಲ್ ಯಾದವ್, ಪ್ರವೀಣ್, ಬಜರಂಗದಳದ ರಾಕೇಶ್, ವಾಸು, ನರೇಶ್ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page