back to top
24 C
Bengaluru
Saturday, August 30, 2025
HomeKarnatakaBengaluru UrbanDecember ನಲ್ಲಿ Whitefield Metro ಕಾರ್ಯಾರಂಭ ಸಾಧ್ಯತೆ

December ನಲ್ಲಿ Whitefield Metro ಕಾರ್ಯಾರಂಭ ಸಾಧ್ಯತೆ

- Advertisement -
- Advertisement -

Bengaluru : Reach-1 ಮಾರ್ಗ ವಿಸ್ತರಿತ ಮಾರ್ಗವಾಗಿರುವ ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ (Byappanahalli – Whitefield Metro) ಸಂಪರ್ಕ ಕಲ್ಪಿಸುವ ಮೊಟ್ರೊ ರೈಲು ಮಾರ್ಗದ ಕಾಮಗಾರಿ ಚುರುಕುಗೊಂಡಿದ್ದು, 2022ರ December ವೇಳೆಗೆ ರೈಲುಗಳ ಸಂಚಾರಕ್ಕೆ ಮಾರ್ಗವನ್ನು ಮುಕ್ತಗೊಳಿಸಲು BMRCL (ಬೆಂಗಳೂರು ಮೆಟ್ರೊ ರೈಲು ನಿಗಮ) ತೀರ್ಮಾನಿಸಿದೆ. ನಗರದ ಅನೇಕ ರಸ್ತೆಗಳಲ್ಲಿ ವಾಹನ ದಟ್ಟಣೆ ಕಡಿಮೆಗೊಳಿಸುವಲ್ಲಿ ಈ ಮೆಟ್ರೊ ಮಾರ್ಗ ಮಹತ್ತರ ಪಾತ್ರವಹಿಸಲಿದ್ದು ಈ ಮಾರ್ಗದ ಕಾಮಗಾರಿ ಪೂರ್ಣಗೊಂಡರೆ ಕೆಂಗೇರಿಯಿಂದ ವೈಟ್‌ಫೀಲ್ಡ್‌ಗೆ ನಿರಂತರ ಮೆಟ್ರೊ ಸಂಪರ್ಕ ದೊರೆಯಲಿದೆ.

‘ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ ತನಕ 15.50 ಕಿ.ಮೀ. ಉದ್ದದ ರೈಲು ಮಾರ್ಗದಲ್ಲಿ 14 ನಿಲ್ದಾಣಗಳು ನಿರ್ಮಾಣವಾಗುತ್ತಿದ್ದು ಕಾಮಗಾರಿ ಪೂರ್ಣಗೊಂಡು ವೈಟ್‌ಫೀಲ್ಡ್‌ ತನಕ ರೈಲುಗಳ ಸಂಚಾರ ಆರಂಭವಾದರೆ ಐ.ಟಿ ಕಾರಿಡಾರ್‌ಗೆ ನಗರದ ವಿವಿಧೆಡೆಯಿಂದ ಸಂಪರ್ಕ ಕಲ್ಪಿಸಿದಂತೆ ಆಗಲಿದೆ. ಸಿವಿಲ್ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು ಹಳಿಗಳ ಜೋಡಣೆ ಮತ್ತು ನಿಲ್ದಾಣಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ’ ಎಂದು BMRCL ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೆಜ್ ಹೇಳಿದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page