Bengaluru: ಅಕ್ರಮವಾಗಿ ಭಾರತದೊಳಗೆ ನುಸುಳಲು ಮತ್ತು ಬೆಂಗಳೂರಿನಲ್ಲಿ ನೆಲೆಯೂರಲು ಪಾಕಿಸ್ತಾನಿ ಪ್ರಜೆಗಳಿಗೆ (Pakistani illegal imigrants) ಸಹಾಯ ಮಾಡಿದ್ದ ಆರೋಪಿಯನ್ನು ಜಿಗಣಿ ಪೊಲೀಸರು (Jigani Police) ಶನಿವಾರ ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ 55 ವರ್ಷದ ಪರ್ವೇಜ್ ಅಹ್ಮದ್ ಬಂಧಿತ ವ್ಯಕ್ತಿ. ಹಿಂದೂ ಹೆಸರುಗಳನ್ನಿಟ್ಟುಕೊಂಡು ಬೆಂಗಳೂರಿನಲ್ಲಿ ನೆಲಸಿದ್ದ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಕಳೆದ ವಾರ ಬೆಂಗಳೂರು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Majestic ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಆತನನ್ನು ಬಂಧಿಸಲಾಗಿದೆ. ನಕಲಿ ಆಧಾರ್ ಕಾರ್ಡ್ಗಳು, ಭಾರತೀಯ ಪಾಸ್ಪೋರ್ಟ್ಗಳು, ಪ್ಯಾನ್ ಕಾರ್ಡ್ಗಳು ಮತ್ತು ಡ್ರೈವಿಂಗ್ ಲೈಸೆನ್ಸ್ಗಳನ್ನು ಪಡೆಯಲು ಪಾಕಿಸ್ತಾನಿ ಪ್ರಜೆಗಳಿಗೆ ಸಹಾಯ ಮಾಡಿದ ಆರೋಪ ಭಾರತೀಯ ಪರ್ವೇಜ್ ಮೇಲಿದೆ.
ಬಂಧಿತ ಪಾಕಿಸ್ತಾನ ಪ್ರಜೆಗಳ ವಿಚಾರಣೆ ವೇಳೆ ಮತ್ತಷ್ಟು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಪಾಕಿಸ್ತಾನದಿಂದ 15ಕ್ಕೂ ಹೆಚ್ಚು ಜನ ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿರುವುದು ಗೊತ್ತಾಗಿದೆ. ಹದಿನೈದಕ್ಕೂ ಅಧಿಕ ಮಂದಿ ಮೆಹದಿ ಫೌಂಡೇಷನ್ ಸೇರಿದ್ದರು. ಇವರೆಲ್ಲ ಯೂನಸ್ ಅಲ್ಗೋರ್ ಧರ್ಮ ಗುರುಗಳ ಪರ ಪ್ರಚಾರಕ್ಕಾಗಿ ಆಗಮಿಸಿದ್ದಾರೆ ಎನ್ನಲಾಗಿದೆ.