
Balalri: ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ತಾಲೂಕಿನ ಬಿಜೆಪಿ ಯುವ ಮುಖಂಡ (BJP youth leader) ದೇವು ನಾಯಕನ ವಿರುದ್ಧ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ದೇವು ನಾಯಕ ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದ. ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರೊಂದಿಗೆ ಫೋಟೋ ಹಂಚಿಕೊಂಡಿದ್ದ ಈ ಯುವ ಮುಖಂಡ, ಇದೀಗ ಗಂಭೀರ ಆರೋಪದಡಿ ಪೊಲೀಸರ ಅತಿಥಿಯಾಗಿದ್ದಾನೆ.