‘KGF’ ಖ್ಯಾತಿಯ ನಟ ಹಾಗೂ ಕಲಾ ನಿರ್ದೇಶಕ ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ಇಂದು (ಆಗಸ್ಟ್ 25) ಬೆಳಿಗ್ಗೆ ಕುಂದಾಪುರದ ಮನೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.
‘ಆ ದಿನಗಳು’, ‘KGF, ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಪೋಷಕ ನಟನಾಗಿ ಅವರು ಬಹುಮಾನ್ಯತೆ ಗಳಿಸಿದ್ದರು.
‘ಕಾಂತಾರ’ ಚಿತ್ರದ ಚಿತ್ರೀಕರಣ ಸಮಯದಲ್ಲಿ ಅವರಿಗೆ ಪಾರ್ಶ್ವವಾಯು ಬಂದಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಮತ್ತೆ ಅಸ್ವಸ್ಥರಾದ ಅವರು, ಅಂಕದಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.
ದಿನೇಶ್ ಮಂಗಳೂರು ಅವರ ಅಗಲಿಕೆ ಅಭಿಮಾನಿಗಳಿಗೆ, ಕುಟುಂಬದವರಿಗೆ ದುಃಖ ತಂದಿದೆ. ನಿರ್ದೇಶಕ ಪಿ. ಶೇಷಾದ್ರಿ ಅವರು, “ಕಲಾ ನಿರ್ದೇಶಕ, ಕಲಾವಿದ, ನಿರ್ಮಾಪಕ, ಸ್ನೇಹಿತ ದಿನೇಶ್ ಮಂಗಳೂರು ಇನ್ನಿಲ್ಲ. ಹೋಗಿಬಾ ಮಿತ್ರಾ” ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.